ಕೆಲವೊಮ್ಮೆ ಸ್ವಪಕ್ಷೀಯರನ್ನೇ ಟೀಕಿಸಿ ಜನ್ಮ ಜಾಲಾಡುವ ಸ್ವಭಾವವಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಅವರು ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಬಗ್ಗೆ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ ದಿಗ್ವಿಜಯ್ ಸಿಂಗ್ ತಮ್ಮ ಸಹಮತಿ ಸೂಚಿಸಿದ್ದಾರೆ. " ಜಮ್ಮು-ಕಾಶ್ಮೀರದಲ್ಲಿ ಪಿಡಿಪಿಯೊಂದಿಗಿನ ಮೈತ್ರಿ ವಿಫಲವಾಗುವುದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೇ ಕಾರಣ ಎಂದು ಸುಬ್ರಹ್ಮಣಿಯನ್ ಸ್ವಾಮಿ ಟ್ವೀಟ್ ಗೆ ದಿಗ್ವಿಜಯ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ಇದೊಂದು ವಿಚಾರದಲ್ಲಿ ಸುಬ್ರಹ್ಮಣಿಯನ್ ಸ್ವಾಮಿ ಅವರನ್ನು ಒಪ್ಪುವುದಾಗಿ ತಿಳಿಸಿದ್ದಾರೆ.