2010ರ ಚಿದಂಬರಂ ಅವರು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ಪ್ರತಿಭಟನೆಯನ್ನು ನೆನೆದರೆ, ಚಿದಂಬರಂ ಅವರ ನಕಾರಾತ್ಮಕ ಹೇಳಿಕೆಗಳು ಹಾಗೂ ಟ್ವೀಟ್ ಗಳಿಂದ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಚಿದಂಬರಂ ಅವರು ಭಾರತದ ಗೃಹ ಸಚಿವರಾಗಿ ವಿಫಲಾಗಿದ್ದಾರೆ, ಕೆಟ್ಟ ರೀತಿಯಲ್ಲಿ ಸಲಹೆಗಳನ್ನು ನೀಡುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರಗಳನ್ನು ಉರುಳಿಸುವುದು ಕಾಂಗ್ರೆಸ್'ಗೆ ಬೇಕು. ಕಾಶ್ಮೀರದಲ್ಲಿ ಶಾಂತಿ, ಸೌಹಾರ್ದತೆ, ಸೋದರತ್ವ ಭಾವನೆಯನ್ನು ಮರು ಸ್ಥಾಪಿಸುವ ಸಲುವಾಗಿ ಬಿಜೆಪಿ ಹಾಗೂ ಪಿಡಿಪಿ ಮೈತ್ರಿಗೊಂಡಿದೆ. ಆದರೆ, ಕಾಂಗ್ರೆಸ್ ಪಕ್ಷ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂದು ತಿಳಿಸಿದ್ದಾರೆ.