ನೋಡಿಲ್ಲಿ, ಯಾರು ಮಾತನಾಡುತ್ತಿದ್ದಾರೆ: ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸ್ಮೃತಿ ಇರಾನಿ

ಸ್ವಯಂ ಪ್ರಚಾರಕ್ಕಾಗಿ ಸಾಮಾಜಿಕ ಮಾಧ್ಯಮವನ್ನು ಬಳಸಬೇಡಿ ಎಂದು ಸರ್ಕಾರಿ ಅಧಿಕಾರಿಗಳಿಗೆ...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
ನವದೆಹಲಿ: ಸ್ವಯಂ ಪ್ರಚಾರಕ್ಕಾಗಿ ಸಾಮಾಜಿಕ ಮಾಧ್ಯಮವನ್ನು ಬಳಸಬೇಡಿ ಎಂದು ಸರ್ಕಾರಿ ಅಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಸಲಹೆಗೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಧ್ಯೆ ಜಗಳ ಆರಂಭವಾಗಿದೆ.
ನಿನ್ನೆ ಪ್ರಧಾನಿ ಮೋದಿ ವಿರುದ್ಧ ಟೀಕೆ ಮಾಡಿದ್ದ ರಾಹುಲ್ ಗಾಂಧಿ ಸಾಮಾಜಿಕ ಮಾಧ್ಯಮಗಳಲ್ಲಿ ಸ್ವಯಂ ಪ್ರಚಾರ ಮಾಡಬಾರದು ಎಂದು ಅಧಿಕಾರಿಗಳಿಗೆ ಹೇಳುವ ಪ್ರಧಾನಿಯವರೇ ತಮ್ಮನ್ನು ಉದಾಹರಣೆಯಾಗಿ ತೆಗೆದುಕೊಳ್ಳುವ ಸ್ಥಾನದಲ್ಲಿಲ್ಲ. ಇಲ್ಲಿ ಉದಾಹರಣೆಯಾಗಿರುವವರೇ ಸಾಮಾಜಿಕ ಮಾಧ್ಯಮಕ್ಕೆ ಹೆಚ್ಚು ಒತ್ತು ನೀಡುತ್ತಾರೆ ಎಂದು ರಾಹುಲ್ ಗಾಂಧಿ ಟ್ವಿಟ್ಟರ್ ನಲ್ಲಿ ಹೇಳಿದ್ದರು. 
ರಾಹುಲ್ ಗಾಂಧಿಯ ಟ್ವೀಟ್ ಗೆ ತೀಕ್ಷ್ಮವಾಗಿ ಪ್ರತಿಕ್ರಿಯಿಸಿರುವ ಸ್ಮೃತಿ ಇರಾನಿ, ಅತಿಯಾಗಿ ಬೆಲೆ ನೀಡುವ ಕುರಿತು ಯಾರು ಮಾತನಾಡುತ್ತಿದ್ದಾರೆ ನೋಡಿ ಎಂದು ಟ್ವೀಟ್ ಮಾಡಿದ್ದಾರೆ.
2014ರಲ್ಲಿ ಲೋಕಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆ ದಿನದಿಂದಲೂ ಗಾಂಧಿ ಕುಟುಂಬ ಮತ್ತು ಸ್ಮೃತಿ ಇರಾನಿ ಪರಸ್ಪರ ದೋಷಾರೋಪದಲ್ಲಿ ತೊಡಗಿಕೊಂಡು ಬಂದಿದೆ. 
ಪ್ರಧಾನಿ ಮೋದಿಯವರು ಸಾಮಾಜಿಕ ಮಾಧ್ಯಮವನ್ನು ಸಕ್ರಿಯವಾಗಿ ಬಳಸುತ್ತಿದ್ದು ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಮ್ ನಲ್ಲಿ ಅತ್ಯಂತ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ. ಟ್ವಿಟ್ಟರ್ ನಲ್ಲಿ 29.3 ದಶಲಕ್ಷ ಮತ್ತು ಇನ್ಸ್ಟಾಗ್ರಾಮ್ ನಲ್ಲಿ 6.9 ದಶಲಕ್ಷ ಅನುಯಾಯಿಗಳನ್ನು ಹೊಂದಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಮೀರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com