ದೇಶ

ಮುಂಬೈ ಕಾರು ಶೋರೂಂ ನಲ್ಲಿ ಭೀಕರ ಅಗ್ನಿ ಅವಘಡ: 2 ಸಾವು!

ಮುಂಬೈ ಕಾರು ಶೋ ರೂಂ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಮುಂಬೈ ಕಾರು ಶೋರೂಂ ನಲ್ಲಿ ಭೀಕರ ಅಗ್ನಿ ಅವಘಡ: 2 ಸಾವು!
ಅಗ್ನಿ ಅವಘಡಕ್ಕೀಡಾದ ಕಾರು ಶೋ ರೂಂ
Published On :

ಮುಂಬೈ: ಮುಂಬೈ ಕಾರು ಶೋ ರೂಂ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ನವೀ ಮುಂಬೈನ ಕರ್ಘಾರ್ ಪ್ರದೇಶದಲ್ಲಿರುವ ಮಾರುತಿ ಸುಜುಕಿ ಕಾರು ಶೋ ರೂಂನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ, ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ  ದೌಡಾಯಿಸಿದ 5 ಅಗ್ನಿ ಶಾಮಕ ವಾಹನ ಹಾಗೂ ಹಲವು ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಆದರೆ ಅಷ್ಟು ಹೊತ್ತಿಗಾಗಲೇ ಷೋ ರೂಂ ಒಳಗಿದ್ದ ಇಬ್ಬರು ಸಾವನ್ನಪ್ಪಿದ್ದರು ಎಂದು ತಿಳಿದುಬಂದಿದೆ.

ಮೃತರನ್ನು ಶೋ ರೂಂ ನ ಭದ್ರತಾ ಸಿಬ್ಬಂದಿಗಳು ಗುರುತಿಸಲಾಗಿದ್ದು, ಪ್ರಸ್ತುತ ಮೃತ ದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅಂತೆಯೇ ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗುತ್ತಿದ್ದು, ಪ್ರಕರಣ  ದಾಖಲಿಸಿಕೊಂಡಿರುವ ಕರ್ಘಾರ್ ಪೊಲೀಸ್ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.