ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ಇದೆ. ಒಂದೆರಡು ತಿಂಗಳಲ್ಲಿ ಕಾಶ್ಮೀರವನ್ನು ಸಾಮಾನ್ಯ ಸ್ಥಿತಿಗೆ ಮರಳಿಸುವುದು ಪಕ್ಷದ ಮುಖ್ಯ ಉದ್ದೇಶವಾಗಿದೆ ಎಂದು ರಾಮ್ ಮಾಧವ್ ಹೇಳಿದ್ದಾರೆ.