ಶ್ರೀನಗರ: ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ನಾಯಕ ಅಬ್ದುಲ್ ಘನಿ ದಾರ್ ರನ್ನು ಉಗ್ರರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ರೋಮೋ ಬಳಿ ಅಬ್ದುಲ್ ಘನಿ ಮೇಲೆ ಉಗ್ರರು ಗುಂಡು ಹಾರಿಸಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಘನಿ ಮೃತಪಟ್ಟಿದ್ದಾರೆ.
ಕಳೆದ ಎರಡು ವಾರದಲ್ಲಿ ದಕ್ಷಿಣ ಕಾಶ್ಮೀರದಲ್ಲಿ ಪಿಡಿಪಿ ನಾಯಕರ ಮೇಲೆ ನಡೆದ ಮೂರನೇ ದಾಳಿ ಇದಾಗಿದೆ. ಕಳೆದ ತಿಂಗಳು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಪಿಡಿಪಿ ನಾಯಕ ಮತ್ತು ಹಜ್ ಸಚಿವ ಫಾರೂಕ್ ಅಬ್ದ್ರಾಭಿ ನಿವಾಸದ ಮೇಲೆ ಉಗ್ರರು ದಾಳಿ ಮಾಡಿದ್ದು ಇದರಲ್ಲಿ ಇಬ್ಬುರ ಪೊಲೀಸರು ಗಾಯಗೊಂಡಿದ್ದರು.