ಇಸ್ಲಾಮಾಬಾದ್: ದೇಶದ ನಾಗರಿಕರು ಹಾಗೂ ಪೊಲೀಸರ ಮೇಲೆ ದಾಳಿ ನಡೆಸಿದ್ದ ನಾಲ್ವರು ಭಯೋತ್ಪಾದಕರಿಗೆ ಪಾಕಿಸ್ತಾನ ಗಲ್ಲು ಶಿಕ್ಷೆ ಜಾರಿಗೊಳಿಸಿದೆ.
ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದ ಪ್ರಾಂತ್ಯದಲ್ಲಿ ನಾಲ್ವರು ಉಗ್ರರಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಲಾಗಿದೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ. ಗಲ್ಲು ಶಿಕ್ಷೆಗೆ ಗುರಿಯಾದ ಉಗ್ರರು ತೆಹ್ರೀಕ್-ಎ-ತಾಲೀಬಾನ್ ಪಾಕಿಸ್ತಾನ(ಟಿಟಿಪಿ) ಉಗ್ರರೆಂದು ಹೇಳಲಾಗಿದೆ.
ಕಳೆದ ವಾರ ಪಾಕಿಸ್ತಾನದ ನ್ಯಾಯಾಲಯ 30 ಉಗ್ರರಿಗೆ ಗಲ್ಲು ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿತ್ತು. ಈ ಪೈಕಿ ಇಗ 4 ಉಗ್ರರಿಗೆ ಗಲ್ಲು ಶಿಕ್ಷೆ ಜಾರಿಯಾಗಿದೆ.