ದೆಹಲಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಸಾಬೀತು ಪಡಿಸಿದ್ದು, ಆಮ್ ಆದ್ಮಿ ಪಕ್ಷ ಎರಡನೇ ಸ್ಥಾನದಲ್ಲಿದೆ. ಕಾಂಗ್ರೆಸ್ ಮೂರನೇ ಸ್ಥಾನ ಪಡೆದುಕೊಂಡಿದ್ದು, ಹೀನಾಯ ಸೋಲು ಕಂಡಿದೆ.
ಈ ಹಿನ್ನಲೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತಿರುವ ಅಜಯ್ ಮಾಕೇನ್ ಅವರು, ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆಯನ್ನು ಸಲ್ಲಿಸಿದ್ದಾರೆ.
ರಾಜಿನಾಮೆ ಸಲ್ಲಿಸಿದ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ಚುನಾವಣೆ ಕಾಂಗ್ರೆಸ್ ಮರುಜೀವನವಾಗಿತ್ತು. ಈ ಮಟ್ಟಕ್ಕೆ ಫಲಿತಾಂಶ ಬರುತ್ತದೆ ಎಂದು ತಿಳಿದಿರಲಿಲ್ಲ. ನಿರೀಕ್ಷಿಸಿದ್ದಷ್ಟು ಫಲಿತಾಂಶ ಬಂದಿಲ್ಲ. ಹೀಗಾಗಿ ದೆಹಲಿ ಕಾಂಗ್ರೆಸ್ ಅಧ್ಯಕ್ಷನಾಗಿ ಸೋಲಿನ ಹೊಣೆ ಹೊತ್ತು ನನ್ನ ಸ್ಥಾನಕ್ಕೆ ರಾಜಿನಾಮೆಯನ್ನು ನೀಡಿದ್ದೇನೆ ರಾಜಿನಾಮೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.