ನವದೆಹಲಿ: ದೆಹಲಿಯ ಮೂರು ಮಹಾನಗರ ಪಾಲಿಕೆಗಳ ಚುನವಾಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಪಕ್ಷದ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಜನತೆಗೆ ಧನ್ಯವಾದ ತಿಳಿಸಿದ್ದಾರೆ.
ಪಕ್ಷದ ಮೇಲೆ ನಂಬಿಕೆ ಇಟ್ಟಿರುವ ದೆಗಲಿ ಜನತೆಗೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿ ಟ್ವೀಟ್ ಮಾಡಿದ್ದಾರೆ. ಇದೇ ವೇಳೆ ದೆಹಲಿ ಬಿಜೆಪಿಯ ಕಠಿಣ ಪರಿಶ್ರಮಕ್ಕೂ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ದೆಹಲಿ ಬಿಜೆಪಿಯ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
ದೆಹಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದ್ದು, ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ. ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ಇವಿಎಂ ನ್ನು ದುರ್ಬಳಕೆ ಮಾಡಿಕೊಂಡು ಬಿಜೆಪಿ ಗೆದ್ದಿದೆ ಎಂದು ಆರೋಪಿಸಿದೆ.