ಇಟಾನಗರದಲ್ಲಿ ಬಿಜೆಪಿ ಸೇರಿದ 23 ಕಾಂಗ್ರೆಸ್ ಕೌನ್ಸಿಲರ್ ಗಳು

ಇಟಾನಗರ ಮಹಾನಗರ ಪಾಲಿಕೆ(ಐಎಂಸಿ)ಯ 25 ಕಾಂಗ್ರೆಸ್ ಸದಸ್ಯರ ಪೈಕಿ 23 ಸದಸ್ಯರು ಗುರುವಾರ ಬಿಜೆಪಿ ಸೇರಿದ್ದಾರೆ.
ಬಿಜೆಪಿ ಸೇರಿದ ಕಾಂಗ್ರೆಸ್ ಸದಸ್ಯರೊಂದಿಗೆ ಸಿಎಂ ಪೆಮಾ ಖಂಡು
ಬಿಜೆಪಿ ಸೇರಿದ ಕಾಂಗ್ರೆಸ್ ಸದಸ್ಯರೊಂದಿಗೆ ಸಿಎಂ ಪೆಮಾ ಖಂಡು
Updated on
ಇಟಾನಗರ: ಇಟಾನಗರ ಮಹಾನಗರ ಪಾಲಿಕೆ(ಐಎಂಸಿ)ಯ 25 ಕಾಂಗ್ರೆಸ್ ಸದಸ್ಯರ ಪೈಕಿ 23 ಸದಸ್ಯರು ಗುರುವಾರ ಬಿಜೆಪಿ ಸೇರಿದ್ದಾರೆ.
ಮುಖ್ಯಮಂತ್ರಿ ಪೆಮಾ ಖಂಡು ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ತಪಿರ್ ಗೋಯ್ ಅವರ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ನ 23 ಕೌನ್ಸಿಲರ್ ಗಳು ಅಧಿಕೃತವಾಗಿ ಬಿಜೆಪಿ ಸೇರಿದರು.
30 ಸದಸ್ಯ ಬಲದ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಒಟ್ಟು 26 ಸದಸ್ಯರನ್ನು ಹೊಂದಿತ್ತು. ಆದರೆ ಇತ್ತೀಚಿಗೆ ಓರ್ವ ಸದಸ್ಯನನ್ನು ಪಕ್ಷದಿಂದ ಉಚ್ಚಾಟಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯರ ಸಂಖ್ಯೆ 25ಕ್ಕೆ ಇಳಿದಿತ್ತು. ಇದೀಗ ಅದು 2ಕ್ಕೆ ಕುಸಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com