ಸೋಮವಾರ ಬೆಳಗ್ಗೆ ಸುಕ್ಮಾದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಮಾವೋವಾದಿಗಳ ಮಧ್ಯೆ ನಡೆದ ಎನ್ ಕೌಂಟರ್ ನಲ್ಲಿ 25 ಪೊಲೀಸ್ ಸಿಬ್ಬಂದಿ ಮೃತಪಟ್ಟು 5 ಮಂದಿ ಗಾಯಗೊಂಡಿದ್ದರು. ಜಿಲ್ಲೆಯಲ್ಲಿ ರಸ್ತೆ ನಿರ್ಮಾಣ ಮತ್ತು ಸ್ವಚ್ಛತಾ ಚಟುವಟಿಕೆಗಳಲ್ಲಿ ಸ್ಥಳೀಯರಿಗೆ ಸಹಾಯ ಮಾಡುತ್ತಿದ್ದ ವೇಳೆ ಸಿಆರ್ ಪಿಎಫ್ ನ 7 4ನೇ ಬಟಾಲಿಯನ್ ಸಿಬ್ಬಂದಿ ಮೇಲೆ ಮಾವೋವಾದಿಗಳು ಏಕಾಏಕಿ ದಾಳಿ ನಡೆಸಿದ್ದರು.