ಅಕ್ರಮ ಪಟಾಕಿ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಯೋಗಿ ಸೂಚನೆ

ಘಾಜಿಯಾಬಾದ್ ನ ಪಟಾಕಿ ಕಾರ್ಖಾನೆಯಲ್ಲಿ ನಿನ್ನೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಐವರು ಮೃತಪಟ್ಟ ನಂತರ....
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ಲಖನೌ: ಘಾಜಿಯಾಬಾದ್ ನ ಪಟಾಕಿ ಕಾರ್ಖಾನೆಯಲ್ಲಿ ನಿನ್ನೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಐವರು ಮೃತಪಟ್ಟ ನಂತರ ಎಚ್ಚೆತ್ತುಕೊಂಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಅಕ್ರಮ ಪಟಾಕಿ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶನಿವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಕ್ರಮ ಪಟಾಕಿ ಕಾರ್ಖಾನೆಗಳನ್ನು ಗುರುತಿಸಿ ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಆದಿತ್ಯನಾಥ್ ಅವರು ಇಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆದೇಶಿಸಿದ್ದಾರೆ.
ಪರವಾನಗಿ ಪಡೆಯದೇ ಯಾವುದೇ ಪಟಾಕಿ ಕಾರ್ಖಾನೆ ಕಾರ್ಯನಿರ್ವಹಿಸುವಂತಿಲ್ಲ ಮತ್ತು ಜನವಸತಿ ಪ್ರದೇಶದಲ್ಲಿ ಪಟಾಕಿ ಕಾರ್ಖಾನೆ ಇಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಯೋಗಿ ಆದಿತ್ಯನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಿನ್ನೆಯಷ್ಟೇ ಘಾಜಿಯಾಬಾದ್ ನ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಜೀವ ದಹನವಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com