ದೇಶ

ಛತ್ತೀಸ್ಗಢ: 4 ನಕ್ಸಲರನ್ನು ಬಂಧನಕ್ಕೊಳಪಡಿಸಿದ ಸೇನಾ ಪಡೆ

ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಸಿಆರ್'ಪಿಎಫ್ ಯೋಧರು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ...

ಛತ್ತೀಸ್ಗಢ: 4 ನಕ್ಸಲರನ್ನು ಬಂಧನಕ್ಕೊಳಪಡಿಸಿದ ಸೇನಾ ಪಡೆ
ಸಂಗ್ರಹ ಚಿತ್ರ
Published On :
ಬಿಜಾಪುರ (ಛತ್ತೀಸ್ಗಢ): ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಸಿಆರ್'ಪಿಎಫ್ ಯೋಧರು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ. 
ಸುಕ್ಮಾ ನಕ್ಸಲ್ ದಾಳಿಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ನಕ್ಸಲರ ವಿರುದ್ಧದ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿತ್ತು. ಇದರಂತೆ ಬಿಜಾಪುರದಲ್ಲಿ ಇಂದು ನಡೆಸಲಾದ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಬಂಧನಕ್ಕೊಳಪಡಿಸಿದ್ದಾರೆ. 
ಛತ್ತೀಸ್ಗಢ ರಾಜ್ಯದ ಸುಕ್ಮಾದ ರಸ್ತೆಯೊಂದರಲ್ಲಿ ಕಾರ್ಮಿಕರು ಕಾಮಗಾರಿ ಕಾರ್ಯವನ್ನು ಮಾಡುತ್ತಿದ್ದರು ಈ ವೇಳೆ 150ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಕಾರ್ಮಿಕರಿಗೆ ಭದ್ರತೆಯನ್ನು ಒದಗಿಸುತ್ತಿದ್ದರೆ. ಈ ವೇಳೆ ಸ್ಥಳಕ್ಕೆ ಬಂದ 300ಕ್ಕೂ ಹೆಚ್ಚು ನಕ್ಸಲರು ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ 25 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.