ದಿಗ್ವಿಜಯ್ ಸಿಂಗ್ ಗೆ ಕೊಕ್, ನೂತನ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ವೇಣುಗೋಪಾಲ್ ನೇಮಕ

ಕರ್ನಾಟಕ ಮತ್ತು ಗೋವಾ ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಶನಿವಾರ...
ದಿಗ್ವಿಜಯ್ ಸಿಂಗ್
ದಿಗ್ವಿಜಯ್ ಸಿಂಗ್
Updated on: 
ನವದೆಹಲಿ: ಕರ್ನಾಟಕ ಮತ್ತು ಗೋವಾ ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಶನಿವಾರ ತೆಗೆದುಹಾಕಲಾಗಿದೆ.
ಅವರ ಬದಲಿಗೆ ಕರ್ನಾಟಕದಲ್ಲಿ ಪಕ್ಷದ ವ್ಯವಹಾರಗಳ ಉಸ್ತುವಾರಿ ನೋಡಿಕೊಳ್ಳಲು ಕೆ.ಸಿ.ವೇಣುಗೋಪಾಲ್ ಮತ್ತು ಗೋವಾದ ಉಸ್ತುವಾರಿಯಾಗಿ ಎ.ಚೆಲ್ಲ ಕುಮಾರ್ ಅವರನ್ನು ನೇಮಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಹಿರಿಯ ನಾಯಕ ಮಧುಸೂದನ್ ಮಿಸ್ತ್ರಿ ಅವರನ್ನು ಕೂಡ ವಜಾಗೊಳಿಸಲಾಗಿದೆ. 
ಕರ್ನಾಟಕದಲ್ಲಿ ಇನ್ನು ಒಂದು ವರ್ಷದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಈ ಮಹತ್ವದ ಬದಲಾವಣೆಯನ್ನು ಕಾಂಗ್ರೆಸ್ ಹೈಕಮಾಂಡ್ ಮಾಡಿದೆ. 
ಗೋವಾದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಸರ್ಕಾರ ರಚಿಸಲು ಬಹುಮತ ಸಿಕ್ಕಿದ್ದರೂ ಕೂಡ ಕೊನೆ ಕ್ಷಣದಲ್ಲಿ ನಡೆದ ತೀವ್ರ ಪೈಪೋಟಿಯಲ್ಲಿ ಬಿಜೆಪಿಗೆ ಅಧಿಕಾರ ಹೋಯಿತು.ಕಾಂಗ್ರೆಸ್ ಗೆ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ.  ಕಾಂಗ್ರೆಸ್ ನ ಹಿನ್ನಡೆಗೆ ದಿಗ್ವಿಜಯ್ ಸಿಂಗ್ ಅವರೇ ಕಾರಣ ಎಂದು ಗೋವಾ ಕಾಂಗ್ರೆಸ್ ನ ಹಲವು ನಾಯಕರು ಆರೋಪಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com