ಫೇಸ್ ಬುಕ್ ನಲ್ಲಿ ಮಹಿಳಾ ಶಾಸಕಿ ವಿರುದ್ಧ ಅಶ್ಲೀಲ ಪದ ಬಳಸಿದ ಅಸ್ಸಾಂ ಡಿಎಸ್ಪಿ ಬಂಧನ

ಸಾಮಾಜಿಕ ತಾಣ ಫೇಸ್ ಬುಕ್ ನಲ್ಲಿ ಆಡಳಿತರೂಢ ಬಿಜೆಪಿ ಶಾಸಕಿಯೊಬ್ಬರ ವಿರುದ್ಧ ಅಶ್ಲೀಲ ಪದ ಬಳಸಿದ ಆರೋಪದ ಮೇಲೆ....
ಅಂಜನ್ ಬೊರಾ
ಅಂಜನ್ ಬೊರಾ
ಗುವಾಹತಿ: ಸಾಮಾಜಿಕ ತಾಣ ಫೇಸ್ ಬುಕ್ ನಲ್ಲಿ ಆಡಳಿತರೂಢ ಬಿಜೆಪಿ ಶಾಸಕಿಯೊಬ್ಬರ ವಿರುದ್ಧ ಅಶ್ಲೀಲ ಪದ ಬಳಸಿದ ಆರೋಪದ ಮೇಲೆ ಅಸ್ಸಾಂನ ಉಪ ಪೊಲೀಸ್ ವರಿಷ್ಠಾಧಿಕಾರಿಯನ್ನು ಶನಿವಾರ ಬಂಧಿಸಲಾಗಿದೆ.
ಶಾಸಕಿ ವಿರುದ್ಧ ಅಕ್ಷೇಪಾರ್ಹ ಹೇಳಿಕೆ ನೀಡಿದ್ದ ಅಸ್ಸಾಂ ಪೊಲೀಸ್ ಅಧಿಕಾರಿ ಅಂಜನ್ ಬೊರಾ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಬಿಜೆಪಿ ಆಗ್ರಹಿಸಿತ್ತು, ಅಲ್ಲದೆ ಪೊಲೀಸ್ ಅಧಿಕಾರಿ ವಿರುದ್ದ ದೂರು ದಾಖಲಿಸಿತ್ತು. ಈ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡ ಸಿಐಡಿ ಅಧಿಕಾರಿಗಳು ಇಂದು ಅಂಜನ್ ಬೊರಾ ಅವರನ್ನು ವಶಕ್ಕೆ ಪಡೆದಿದ್ದಾರೆ.
ಬಿಜೆಪಿ ಶಾಸಕಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದು, ಗುವಾಹತಿಯ ಸಚಿವಾಲಯದಲ್ಲಿರುವ ತಮ್ಮ ಕಚೇರಿಯಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ ಎಂದು ಬೊರಾ ಫೇಸ್ ಬುಕ್ ಆರೋಪಿಸಿದ್ದರು.
ಅಸ್ಸಾಂನಲ್ಲಿ ಬಿಜೆಪಿಯ ಇಬ್ಬರು ಮಹಿಳಾ ಶಾಸಕಿಯರಿದ್ದು, ಆ ಪೈಕಿ ಓರ್ವ ಮಹಿಳೆಯ ಅಡ್ಡ ಹೆಸರು ಉಲ್ಲೇಶಿಸಿದ್ದ ಬೊರಾ, ಆ ಮಹಿಳೆ ವೇಶ್ಯಾವಾಟಿಕೆ ನಡೆಸುತ್ತಿಲ್ಲ ಎಂದು ಹೇಳಿದ್ದರು. ಇದರೊಂದಿಗೆ ಮತ್ತೊಬ ಬಿಜೆಪಿ ಶಾಸಕ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಪರೋಕ್ಷವಾಗಿ ಆರೋಪಿಸಿದ್ದಾರೆ. ಅಲ್ಲದೆ ಈ ವಿಚಾರವನ್ನು ತಮಗೆ ಸ್ವತಃ ಆರ್ ಎಸ್ಎಸ್ ನಾಯಕರೊಬ್ಬರು ತಿಳಿಸಿರುವುದಾಗಿ ಹೇಳಿದ್ದಾರೆ.
ಬೊರಾ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಸ್ಸಾಂ ಪೊಲೀಸ್ ಮಹಾ ನಿರ್ದೇಶಕ ಮುಕೇಶ್ ಸಹಯ್ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com