ಅತ್ಯಾಚಾರಿ ಆರೋಪಿ ಗಾಯತ್ರಿ ಪ್ರಜಾಪತಿಗೆ ಜಾಮೀನು ಕೊಟ್ಟ ನ್ಯಾಯಾಧೀಶ ಅಮಾನತು!

ಅತ್ಯಾಚಾರ ಪ್ರಕರಣ ಸಂಬಂಧ ಉತ್ತರಪ್ರದೇಶ ರಾಜ್ಯದ ಮಾಜಿ ಸಚಿವ ಹಾಗೂ ಬಹುಜನ ಸಮಾಜ ಪಕ್ಷದ ನಾಯಕ ಗಾಯತ್ರಿ ಪ್ರಜಾಪತಿ ಅವರಿಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರೊಬ್ಬರನ್ನು ಅಮಾನತುಗೊಳಿಸಲಾಗಿದೆ...
ಬಹುಜನ ಸಮಾಜ ಪಕ್ಷದ ನಾಯಕ ಗಾಯತ್ರಿ ಪ್ರಜಾಪತಿ
ಬಹುಜನ ಸಮಾಜ ಪಕ್ಷದ ನಾಯಕ ಗಾಯತ್ರಿ ಪ್ರಜಾಪತಿ

ಲಖನೌ: ಅತ್ಯಾಚಾರ ಪ್ರಕರಣ ಸಂಬಂಧ ಉತ್ತರಪ್ರದೇಶ ರಾಜ್ಯದ ಮಾಜಿ ಸಚಿವ ಹಾಗೂ ಬಹುಜನ ಸಮಾಜ ಪಕ್ಷದ ನಾಯಕ ಗಾಯತ್ರಿ ಪ್ರಜಾಪತಿ ಅವರಿಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರೊಬ್ಬರನ್ನು ಅಮಾನತುಗೊಳಿಸಲಾಗಿದೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಓಂ ಪ್ರಕಾಶ್ ಮಿಶ್ರಾವನ್ನು ಅವರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ, ಆಕೆಯ ಪುತ್ರಿಯ ಮೇಲೂ ಅತ್ಯಾಚಾರ ಮಾಡಿರುವ ಆರೋಪ ಗಾಯತ್ರಿ ಪ್ರಜಾಪತಿಯವರ ಮೇಲೆ ಕೇಳಿಬಂದಿತ್ತು. ಪ್ರಕರಣ ಸಂಬಂಧ ಗಾಯತ್ರಿ ಪ್ರಜಾಪತಿಯವರಿಗೆ ನ್ಯಾಯಾಧೀಶ ಓಂ.ಪ್ರಕಾಶ್ ಅವರು ಜಮೀನು ಮಂಜೂರು ಮಾಡಿದ್ದರು. ನ್ಯಾಯಾಧೀಶರ ಈ ನಿರ್ಧಾರ ವಿವಾದಕ್ಕೆ ಕಾರಣವಾಗಿತ್ತು.

ಇದ್ನು ಪ್ರಶ್ನಿಸಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಾಧೀಶರು ಈ ತೀರ್ಪು ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com