ಮ್ಯಾನ್ಮಾರ್: ಕಂದಕಕ್ಕೆ ಉರುಳಿ ಬಿದ್ದ ಬಸ್, 19 ಮಂದಿ ಸಾವು

ಪೂರ್ವ ಮ್ಯಾನ್ಮಾರ್ ಭೀಕರ ಅಪಘಾತ ಸಂಭವಿಸಿದ್ದು, ಬಸ್ ವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 19 ಮಂದಿ ಸಾವನ್ನಪ್ಪಿ 21 ಜನರಿಗೆ ಗಾಯವಾಗಿರುವ ಘಟನೆ ಶುಕ್ರವಾರ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಯಾಂಗೊನ್: ಪೂರ್ವ ಮ್ಯಾನ್ಮಾರ್ ಭೀಕರ ಅಪಘಾತ ಸಂಭವಿಸಿದ್ದು, ಬಸ್ ವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 19 ಮಂದಿ ಸಾವನ್ನಪ್ಪಿ 21 ಜನರಿಗೆ ಗಾಯವಾಗಿರುವ ಘಟನೆ ಶುಕ್ರವಾರ ನಡೆದಿದೆ. 
ಕೇಂದ್ರ ಬಾಗೋ ಪ್ರದೇಶದಿಂದ ಬರುತ್ತಿದ್ದ ಬಸ್ ವೊಂದು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಮ್ಯಾವಡ್ಡಿ ಹೆದ್ದಾರಿ ಬಳಿ ಬರುತ್ತಿದ್ದಂತೆ ಥೈ ಗಡಿಯಲ್ಲಿ ಕಂದಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಬಸ್ ನಲ್ಲಿದ್ದ 40 ಜನರ ಪೈಕಿ 19 ಮಂದಿ ಸಾವನ್ನಪ್ಪಿ, 21 ಮಂದಿ ಗಾಯಗೊಂಡಿದ್ದಾರೆಂದು ಪೊಲೀಸರು ಹೇಳಿದ್ದಾರೆ. 
ಗಾಯಗೊಂಡಿರುವ 21 ಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬ್ರೇಕ್ ವೈಫಲ್ಯದಿಂದಾಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ತಿಳಿಸಿದ್ದಾರೆ. 
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ರಕ್ಷಣೆ ಮಾಡಿದರು. ನಂತರ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. 21 ಗಾಯಾಳುಗಳ ಪೈಕಿ 7 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com