ನವದೆಹಲಿ: ದಯವೇ ಧರ್ಮದ ಮೂಲವಯ್ಯಾ ಎಂದು ನುಡಿದ ಮಹಾನ್ ಮಾನವತಾವಾದಿ, ಸಮಾಜ ಸುಧಾರಕ ಬಸವಣ್ಣ ಜಯಂತಿಯನ್ನು ದೆಹಲಿಯಲ್ಲಿ ಆಚರಿಸಲಾಗಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ಬಸವ ಜಯಂತಿ ಆಚರಣೆ ಹಿನ್ನೆಲೆ ಸುವರ್ಣ ಮಹೋತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಅನುಭವ ಮಂಟಪದ ಮೂಲಕ ಸಮಾನತೆ ಸಾರಿದ ಶರಣ ಬಸವಣ್ಣ ಜಯಂತಿಯನ್ನು ದೆಹಲಿಯಲ್ಲಿ ಆಚರಿಸಲಾಗುತ್ತಿದೆ.
ಇದೇ ವೇಳೆ ಬಸವಣ್ಣ ಸೇರಿದಂತೆ 173 ಶರಣರ ವಚನಗಳು 23 ಭಾಷೆಗಳಿಗೆ ಅನುವಾದಗೊಂಡಿದ್ದು ಈ ಪುಸ್ತಕವನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದರು. ಇದರಲ್ಲಿ ಸರಿಸುಮಾರು 2500 ವಚನಗಳು 23 ಭಾಷೆಗಳಿಗೆ ಅನುವಾದಗೊಂಡಿವೆ.
ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ಬಸವ ಜಯಂತಿ ಆಚರಣೆಯಲ್ಲಿ ಕೇಂದ್ರ ಸಚಿವರಾದ ಅನಂತ್ ಕುಮಾರ್, ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಬಸವರಾಜ ರಾಯರೆಡ್ಡಿ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದಾರೆ.