ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ದೇಶ
ಹೌದು, ತಪ್ಪು ಮಾಡಿದ್ದೇವೆ, ಪರಾಮರ್ಶೆ ನಡೆಸಿ ತಿದ್ದಿಕೊಳ್ಳುತ್ತೇವೆ: ಕೇಜ್ರಿವಾಲ್
ಹೌದು ನಾವು ತಪ್ಪು ಮಾಡಿದ್ದೇವೆ, ಸೋಲಿನ ಪರಾಮರ್ಶೆ ನಡೆಸಿ ತಪ್ಪನ್ನು ಸರಿಪಡಿಸಿಕೊಳ್ಳುತ್ತೇವೆಂದು ದೆಹಲಿ ಪಾಲಿಕೆ ಚುನಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಿದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು...
ನವದೆಹಲಿ: ಹೌದು ನಾವು ತಪ್ಪು ಮಾಡಿದ್ದೇವೆ, ಸೋಲಿನ ಪರಾಮರ್ಶೆ ನಡೆಸಿ ತಪ್ಪನ್ನು ಸರಿಪಡಿಸಿಕೊಳ್ಳುತ್ತೇವೆಂದು ದೆಹಲಿ ಪಾಲಿಕೆ ಚುನಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಿದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ಟಿಟರ್ ನಲ್ಲಿ ಟ್ವೀಟ್ ಮಾಡಿರುವ ಕೇಜ್ರಿವಾಲ್ ಅವರು, ಪುನಃ ಹಿಂದಿನ ಸ್ಥಿತಿಗೆ ಮರಳಬೇಕಿದೆ. ಈ ಕುರಿತು ಮೌಲ್ಯಮಾನ ನಡೆಯಬೇಕು. ಇದಕ್ಕೆ ಕ್ಷಮೆಯಿಲ್ಲ ಎಂದು ಹೇಳಿದ್ದಾರೆ.
ಕಳೆದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಖಾತೆ ತೆರೆಯಲು ಕೇಜ್ರಿವಾಲ್ ಅವರು ಶಕ್ತಿ ಮೀರಿ ಪ್ರಯತ್ನ ನಡೆಸಿದ್ದರು. ಆದರಲ್ಲೂ ಪಂಜಾಬ್ ಹಾಗೂ ಗೋವಾ ರಾಜ್ಯಗಳಲ್ಲಿ ದಿನವಿಡೀ ಪ್ರಚಾರ ಮಾಡಿದ್ದರು.
ದೆಹಲಿ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 272 ಸೀಟುಗಳ ಪೈಕಿ ಕೇವಲ 48 ಸೀಟುಗಳನ್ನು ಮಾತ್ರ ಗೆದ್ದಿತ್ತು. ಬಿಜೆಪಿಗೆ ಭಾರೀ ಬಹುಮತ ಲಭಿಸಿತ್ತು.
ಪಾಲಿಕೆ ಚುನಾವಣೆ ಸೋಲು ಹಿನ್ನಲೆಯಲ್ಲಿ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದ ಕೇಜ್ರಿವಾಲ್ ಅವರ ಆಪ್ತ ಕುಮಾರ್ ವಿಶ್ವಾಸ್ ಅವರು 'ನಮ್ಮ ಮೇಲೆ ಜನರಿಗೆ ಅಪನಂಬಿಕೆ ಇದೆ. ಇವಿಎಂ (ವಿದ್ಯುನ್ಮಾನ ಮತಯಂತ್ರ)ಗಳನ್ನು ದೂರುವ ಬದಲು ಸೋಲಿನ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ