ಏ.16 ರಂದು ಟರ್ಕಿಯಲ್ಲಿ ಪ್ರಕಟವಾದ ಚುನಾವಣಾ ಫಲಿತಾಂಶದಿಂದ ಎರ್ಡೋಗನ್ ಗೆ ಹೆಚ್ಚಿನ ಅಧಿಕಾರ ದೊರೆತಿದ್ದು, ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಟರ್ಕಿ ಹಾಗೂ ಭಾರತ 6.4 ಬಿಲಿಯನ್ ಡಾಲರ್ ನಷ್ಟು ವ್ಯಾಪಾರ ವಹಿವಾಟುಗಳನ್ನು ಹೊಂದಿದ್ದು, ಭಾರತದೊಂದಿಗಿನ ವ್ಯಾಪಾರ-ವಹಿವಾಟು ಕೊರತೆಯನ್ನು ಕಡಿಮೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.