ಆಗಸ್ಟ್ 8ರಂದು ಗುಜರಾತ್ ನಲ್ಲಿ ರಾಜ್ಯಸಭೆ ಚುನಾವಣೆ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಶಾಸಕರು ನೋಟಾ ಆಯ್ಕೆಯನ್ನು ಬಳಸಲು ಆಯ್ಕೆ ನೀಡಲಾಗಿದೆ. ಈ ವಿಚಾರವೂ ಸಹ ರಾಜ್ಯಸಭೆಯಲ್ಲಿ ಪ್ರಸ್ತಾಪವಾಗಿದ್ದು, ಕಾಂಗ್ರೆಸ್ ಸಂಸದ ಆನಂದ್ ಶರ್ಮಾ, ಸದನದ ಗಮನಕ್ಕೆ ತಾರದೆ ಚುನಾವಣಾ ಆಯೋಗ ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ನೋಟಾ ಜಾರಿಗೆ ತಂದಿದೆ. ಈ ಮೂಲಕ ಸಂವಿಧಾನ ವಿರೋಧಿ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದರು.