ಐಟಿ ದಾಳಿಗಳಿಗೆ ಕಾಂಗ್ರೆಸ್, ಕರ್ನಾಟಕ ಸರ್ಕಾರ ಸಹಕಾರ ನೀಡಬೇಕು: ಅನಂತ್ ಕುಮಾರ್

ಐಟಿ ದಾಳಿ ಭ್ರಷ್ಟಾಚಾರ ವಿರುದ್ಧದ ಹೋರಾಟವಾಗಿದ್ದು, ಕರ್ನಾಟಕ ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲಿನ ಐಟಿ ದಾಳಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಬಾರದು ಎಂದು ಕೇಂದ್ರ ಸಚಿವ ಅನಂತ್ ಕುಮಾರ್...
ಕೇಂದ್ರ ಸಚಿವ ಅನಂತ್ ಕುಮಾರ್
ಕೇಂದ್ರ ಸಚಿವ ಅನಂತ್ ಕುಮಾರ್
Updated on: 
ನವದೆಹಲಿ: ಐಟಿ ದಾಳಿ ಭ್ರಷ್ಟಾಚಾರ ವಿರುದ್ಧದ ಹೋರಾಟವಾಗಿದ್ದು, ಕರ್ನಾಟಕ ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲಿನ ಐಟಿ ದಾಳಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಬಾರದು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಗುರುವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಕಪ್ಪು ಹಣದ ಪಿಡುಗನ್ನು ಬುಡ ಸಮೇತ ಕಿತ್ತುಹಾಕಲು ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದ್ದು, ಇಂತಹ ಕಾರ್ಯಾಚರಣೆಗಳಿಗೆ ಕರ್ನಾಟಕ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಸಹಕಾರ ನೀಡಬೇಕಿದೆ ಎಂದು ಹೇಳಿದ್ದಾರೆ. 
ಐಟಿ ದಾಳಿ ಕಪ್ಪು ಹಣದ ವಿರುದ್ಧ ತೆಗೆದುಕೊಂಡಿರುವ ಕ್ರಮವಾಗಿದೆ. ದಾಳಿಗೆ ಶಿವಕುಮಾರ್, ಕರ್ನಾಟಕ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷಗಳು ಸಹಕಾರ ನೀಡಬೇಕಿದೆ. ಕಪ್ಪು ಹಣಕ್ಕೆ ಬೆಂಬಲ ನೀಡುವ ಬದಲಾಗಿ ಅದರ ವಿರುದ್ಧ ಕಾಂಗ್ರೆಸ್ ಕೂಡ ಹೋರಾಟ ಮಾಡಬೇಕೆಂದು ಈ ಮೂಲಕ ನಾನು ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ. 
ನಿನ್ನೆಯಷ್ಟೇ ಬೆಂಗಳೂರಿನ ಸದಾಶಿವನಗರದ ಮನೆ ಹಾಗೂ ಗುಜರಾತ್ ಕಾಂಗ್ರೆಸ್ ಶಾಸಕರು ತಂಗಿದ್ದ ಈಗಲ್ ಟನ್ ರೆಸಾರ್ಟ್ ಸೇರಿದಂತೆ ಡಿ.ಕೆ ಶಿವಕುಮಾರ್ ಗೆ ಸೇರಿದ ಹಲವು ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರು. ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ, ಸಂಸತ್ತಿನಲ್ಲೂ ತೀವ್ರ ಗದ್ದಲವನ್ನುಂಟು ಮಾಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com