ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗಸ್ತು ತಿರುಗುತ್ತಿದ್ದ ಸೇನಾಪಡೆ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಸೇನಾಧಿಕಾರಿ ಸೇರಿ ಇಬ್ಬರು ಯೋಧರು ಹುತಾತ್ಮರಾಗಿರುವ ಘಟನೆ...
ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗಸ್ತು ತಿರುಗುತ್ತಿದ್ದ ಸೇನಾಪಡೆ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಸೇನಾಧಿಕಾರಿ ಸೇರಿ ಇಬ್ಬರು ಯೋಧರು ಹುತಾತ್ಮರಾಗಿರುವ ಘಟನೆ ಗುರುವಾರ ನಡೆದಿದೆ.
ಶೋಪಿಯಾನ್ ಜಿಲ್ಲೆಯ ಇಮಾಮ್ ಸಾಹಬ್ ಪ್ರದೇಶದಲ್ಲಿ ಉಗ್ರರ ಲನವಲನಗಳ ಬಗ್ಗೆ ಪಡೆದುಕೊಂಡಿದ್ದ ಸೇನಾ ಪಡೆ ಇಂದು ಬೆಳಿಗ್ಗೆ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಪರಿಣಾಮ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಯೋಧರನ್ನು ಸೇನೆಯ 92 ಬೇಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಸೇನಾಧಿಕಾರಿ ಸೇರಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಮತ್ತೋರ್ವ ಯೋಧನಿಗೆ ಚಿಕಿತ್ಸೆ ಮುಂದುವರೆಸಲಾಗುತ್ತಿದೆ. ಸ್ಥಳದಲ್ಲಿ ಕಾರ್ಯಾಚರಣೆಯನ್ನು ಮುಂದುವರೆಸಲಾಗುತ್ತಿದೆ ಅಧಿಕಾರಿಗಳು ತಿಳಿಸಿದ್ದಾರೆ.