ಅಕ್ಟೋಬರ್ 1 ರಿಂದ ಮರಣ ನೋಂದಣಿಗೆ ಆಧಾರ್ ಕಡ್ಡಾಯ!

ಗುರುತಿನ ವಂಚನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮರಣ ನೋಂದಣಿಗೂ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸಿದ್ದು, ಅಕ್ಟೋಬರ್ 1 ರಿಂದ ಈ ನಿಯಮ ಜಾರಿಗೆ ಬರಲಿದೆ.
ಆಧಾರ್ ನಂಬರ್
ಆಧಾರ್ ನಂಬರ್
ನವದೆಹಲಿ: ಗುರುತಿನ ವಂಚನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮರಣ ನೋಂದಣಿಗೂ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸಿದ್ದು, ಅಕ್ಟೋಬರ್ 1 ರಿಂದ ಈ ನಿಯಮ ಜಾರಿಗೆ ಬರಲಿದೆ. 
ಕೇಂದ್ರ ಗೃಹ ಇಲಾಖೆ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಜಮ್ಮು-ಕಾಶ್ಮೀರ, ಅಸ್ಸಾಂ, ಮೇಘಾಲಯ ರಾಜ್ಯಗಳನ್ನು ಹೊರತುಪಡಿಸಿ ಅಕ್ಟೋಬರ್ 1 ರಿಂದ ಎಲ್ಲಾ ರಾಜ್ಯಗಳಲ್ಲೂ ನಿಯಮ ಅನ್ವಯವಾಗಲಿದೆ ಎಂದು ಹೇಳಿದೆ.ಜಮ್ಮು-ಕಾಶ್ಮೀರ, ಅಸ್ಸಾಂ, ಮೇಘಾಲಯ ರಾಜ್ಯಗಳಿಗೆ ಪ್ರತ್ಯೇಕ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಗೃಹ ಇಲಾಖೆ ತಿಳಿಸಿದೆ. 
ನಿಧನರಾದ ವ್ಯಕ್ತಿಯ ಗುರುತನ್ನು ದಾಖಲಿಸುವುದಕ್ಕಾಗಿ ಆಧಾರ್ ಸಂಖ್ಯೆಯನ್ನು ಮರಣ ನೋಂದಣಿಗೂ ಕಡ್ಡಾಯಗೊಳಿಸಲಾಗಿದ್ದು, ಅಕ್ಟೋಬರ್ 1 ರಿಂದ  ಜಾರಿಗೆ ಬರಲಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರದ ಈ ಹೊಸ ಕ್ರಮದಿಂದ ಗುರುತಿನ ವಂಚನೆಯನ್ನು ತಡೆಗಟ್ಟಲು ಸಾಧ್ಯವಿದ್ದು ಸಾವನ್ನಪ್ಪಿರುವ ವ್ಯಕ್ತಿಯ ಗುರುತನ್ನು ಸಾಬೀತುಪಡಿಸುವುದಕ್ಕೆ ಹಲವು ದಾಖಲೆಗಳನ್ನು ಒದಗಿಸುವ ಪ್ರಕ್ರಿಯೆಗಳೂ ಅಗತ್ಯವಿರುವುದಿಲ್ಲ ಎಂದು ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com