ಮಧ್ಯ ಪ್ರದೇಶದಿಂದ ರಾಜ್ಯಸಭೆಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಗೆಲುವು ಸಾಧಿಸಿದ್ದ ಸಂಪತಿಯಾ ಯುಕೇ ಅವರು ಇಂದು ಮೇಲ್ಮನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರ ಸಂಖ್ಯೆ 58ಕ್ಕೆ ಏರಿಕೆಯಾಗಿದೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 57 ಸದಸ್ಯರನ್ನು ಹೊಂದಿದೆ.