ಜಮ್ಮು-ಕಾಶ್ಮೀರದಿಂದ 16,000 ಸ್ಥಳೀಯರನ್ನು ನೇಮಕ ಮಾಡಿಕೊಳ್ಳಲಿರುವ ಕೇಂದ್ರ ಗೃಹ ಇಲಾಖೆ!

ಜಮ್ಮು-ಕಾಶ್ಮೀರದ ಯುವಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಕೇಂದ್ರ ಗೃಹ ಇಲಾಖೆ 16,000 ಸ್ಥಳೀಯರನ್ನು ನೇಮಕ ಮಾಡಿಕೊಳ್ಳುವುದಾಗಿ ಹೇಳಿದೆ.
ಜಮ್ಮು-ಕಾಶ್ಮೀರದಿಂದ 16,000 ಸ್ಥಳೀಯರನ್ನು ನೇಮಕ ಮಾಡಿಕೊಳ್ಳಲಿರುವ ಕೇಂದ್ರ ಗೃಹ ಇಲಾಖೆ!
ಜಮ್ಮು-ಕಾಶ್ಮೀರದಿಂದ 16,000 ಸ್ಥಳೀಯರನ್ನು ನೇಮಕ ಮಾಡಿಕೊಳ್ಳಲಿರುವ ಕೇಂದ್ರ ಗೃಹ ಇಲಾಖೆ!
ನವದೆಹಲಿ: ಜಮ್ಮು-ಕಾಶ್ಮೀರದ ಯುವಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಕೇಂದ್ರ ಗೃಹ ಇಲಾಖೆ 16,000 ಸ್ಥಳೀಯರನ್ನು ನೇಮಕ ಮಾಡಿಕೊಳ್ಳುವುದಾಗಿ ಹೇಳಿದೆ. 
ಭಾರತೀಯ ಸೇನೆಯ ವಿವಿಧ ವಿಭಾಗಗಳಿಗೆ ಸ್ಥಳೀಯರನ್ನು ನೇಮಕ ಮಾಡಿಕೊಳ್ಳುವುದಾಗಿ ತಿಳಿಸಿದೆ. ರಾಜ್ಯಸಭೆಯಲ್ಲಿ ಈ ಬಗ್ಗೆ ಲಿಖಿತ ಮಾಹಿತಿ ನೀಡಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹಂಸರಾಜ್ ಅಹಿರ್ ಪೊಲೀಸರು ಸ್ಥಳೀಯ ಯುವಕರನ್ನು ಮುಖ್ಯವಾಹಿನಿಗೆ ಕರೆತರಲು ಕ್ರೀಡೆ, ಕಮ್ಯುನಿಟಿ ಪೊಲೀಸಿಂಗ್ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಜಮ್ಮು-ಕಾಶ್ಮೀರ ಯುವಕರಿಗೆ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಸರ್ಕಾರ ಹೆಚ್ಚುವರಿಯಾಗಿ 10,000 ಎಸ್ ಪಿಒಸ್ ಗಳ ನೇಮಕ ಮಾಡಿಕೊಳ್ಳಲು ಅನುಮೋದನೆ ನೀಡಿದೆ. ಇದರೊಂದಿಗೆ ಸಿಎಪಿಎಎಫ್ ಹಾಗೂ ಅಸ್ಸಾಂ ರೈಫಲ್ಸ್ ಗೆ 1079 ಸಿಬ್ಬಂದಿಗಳು ಹೊಸ ಭಾರತ ರಿಸರ್ವ್ ಬೆಟಾಲಿಯನ್ ಗಳಿಗೆ 5,381 ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಅನುಮೋದನೆ ನೀಡಿದೆ ಎಂದು ಹಂಸರಾಜ್ ಅಹಿರ್ ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com