ಕಾರ್ತಿ ಚಿದಂಬರಂ
ದೇಶ
ಕಾರ್ತಿ ಚಿದಂಬರಂ ವಿರುದ್ಧ ಲುಕ್ ಔಟ್ ನೋಟೀಸ್ ಜಾರಿ?
ಕಾಂಗ್ರೆಸ್ ನಾಯಕ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆಗೆ ಸಂಬಂಧಿಸಿದಂತೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.
ಚೆನ್ನೈ: ಕಾಂಗ್ರೆಸ್ ನಾಯಕ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆಗೆ ಸಂಬಂಧಿಸಿದಂತೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.
ಕಳೆದ 10 ದಿನಗಳ ಹಿಂದೆ ಸಿಬಿಐ ಲುಕ್ ಔಟ್ ನೋಟಿಸ್ ಜಾರಿಗೊಳಿಸುವುದರ ವಿರುದ್ಧ ಕಾರ್ತಿ ಚಿದಂಬರಂ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದರು, ಈಗ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್ ಈ ವಿಷಯವಾಗಿ ಗೃಹ ಸಚಿವಾಲಯದಿಂದ ಸ್ಪಷ್ಟನೆ ಕೇಳಿದ್ದು, ಆ.07ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಐಎನ್ಎಕ್ಸ್ ಮೀಡಿಯಾ ಡೀಲ್ ಗೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗೆ ಖುದ್ದು ಹಾಜರಾಗಬೇಕೆಂದು ಸಿಬಿಐ ಕಾರ್ತಿ ಚಿದಂಬರಂ ಗೆ ಸಮನ್ಸ್ ಜಾರಿಗೊಳಿಸಿತ್ತು. ಆದರೆ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿದೆಯೇ ಎಂಬ ಬಗ್ಗೆ ಈ ವರೆಗೂ ಕಾರ್ತಿ ಚಿದಂಬರಂ ಸ್ಪಷ್ಟನೆ ನೀಡಿಲ್ಲ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ