ಕಾರಿನ ಮೇಲೆ ದಾಳಿ: ಅದು ಬಿಜೆಪಿ, ಆರ್'ಎಸ್ಎಸ್ ರಾಜಕೀಯದ ದಾರಿ ಎಂದ ರಾಹುಲ್ ಗಾಂಧಿ

ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್'ಎಸ್ಎಸ್) ದವರು ನನ್ನ ಕಾರಿನ ಮೇಲೆ ದಾಳಿ ನಡೆಸಿದ್ದರು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ನವದೆಹಲಿ: ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್'ಎಸ್ಎಸ್) ದವರು ನನ್ನ ಕಾರಿನ ಮೇಲೆ ದಾಳಿ ನಡೆಸಿದ್ದರು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಶನಿವಾರ ಹೇಳಿದ್ದಾರೆ. 
ನಿನ್ನೆಯಷ್ಟೇ ಪ್ರವಾಹ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಲು ಗುಜರಾತ್'ಗೆ ತೆರಳಿದ್ದ ವೇಳೆ ರಾಹುಲ್ ಗಾಂಧಿಯವರ ಕಾರಿನ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ್ದರು. ಅಲ್ಲದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪರ ಘೋಷಣೆಗಳನ್ನು ಕೂಗಿದ್ದರು. 
ಘಟನೆ ಕುರಿತಂತೆ ಇಂದು ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿ ಕಾರ್ಯಕರ್ತರು ನನ್ನ ಮೇಲೆ ಕಲ್ಲುಗಳನ್ನ ಎಸೆದರು. ಈ ವೇಳೆ ನನ್ನ ಖಾಸಗಿ ಭದ್ರತಾಧಿಕಾರಿಗೆ ಗಾಯವಾಗಿತ್ತು. ಇದು ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಆರ್'ಎಸ್ಎಸ್ ನವರ ರಾಜಕೀಯ ಶೈಲಿಯಾಗಿದೆ. ಇದಕ್ಕಿಂತ ನಾನು ಇನ್ನೇನು ಹೇಳಲಿ? ಎಂದು ಹೇಳಿದ್ದಾರೆ. 
ದಾಳಿ ಕೃತ್ಯವನ್ನು ಬಿಜೆಪಿಯವರೇ ಮಾಡಿದ್ದು, ಬಿಜೆಪಿ ನಾಯಕರು ಈ ಘಟನೆಯನ್ನು ಖಂಡಿಸುತ್ತಾರೆಯೇ...? ಎಂದು ಪ್ರಶ್ನಿಸಿದ್ದಾರೆ. 
ಘಟನೆಗೆ ಗುಜರಾತ್ ರಾಜ್ಯ ಮುಖ್ಯಮಂತ್ರಿ ವಿಜಯ್ ರೂಪಾನಿಯವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ರಾಹುಲ್ ಗಾಂಧಿಯವರ ಕಾರಿನ ಮೇಲೆ ನಡೆದಿರುವ ದಾಳಿ ಖಂಡನೀಯ ಹಾಗೂ ದುರಾದೃಷ್ಟರ ಸಂಗತಿ. ಘಟನೆಗೆ ಸಂಬಂಧ ಈಗಾಗಲೇ ಹಿರಿಯ ಅಧಿಕಾರಿಯನ್ನು ನೇಮಿಸಿ ತನಿಖೆಗೆ ಆದೇಶಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com