ಬಾರಾಮುಲ್ಲಾದಲ್ಲಿ ಎನ್'ಕೌಂಟರ್: 3 ಉಗ್ರರ ಹತ್ಯೆಗೈದ ಸೇನೆ, ಓರ್ವ ಯೋಧನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ ಕೌಂಟರ್ ನಡೆಸಿದ್ದು ಲಷ್ಕರ್-ಇ-ತೊಯ್ಬಾ ಸಂಘಟನೆಯ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಾರಾಮುಲ್ಲಾ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ ಕೌಂಟರ್ ನಡೆಸಿದ್ದು ಲಷ್ಕರ್-ಇ-ತೊಯ್ಬಾ ಸಂಘಟನೆಯ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 

ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ಪ್ರದೇಶದಲ್ಲಿರುವ ಅಮರ್ಘಾಡ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ತಿಳಿದುಬಂದ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸೇನಾ ಪಡೆ ಹಾಗೂ ಸಿಆರ್'ಪಿಎಫ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಮುಂದಾಗಿದ್ದವು. 

ಈ ವೇಳೆ ಉಗ್ರರು ಸೇನಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಕೂಡಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸುತ್ತಿದ್ದ ಮೂವರು ಉಗ್ರರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿವೆ. 

ಕಾರ್ಯಾಚರಣೆ ವೇಳೆ ಉಗ್ರರು ಹಾಗೂ ಸೇನಾ ಪಡೆಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಯೋಧನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿದೆ. ಇದೀಗ ಯೋಧ ಚೇತರಿಸಿಕೊಳ್ಳುತ್ತಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿರುವ ಹಿನ್ನಲೆಯಲ್ಲಿ ಎನ್ ಕೌಂಟರ್ ನಡೆದ ಸೊಪೋರ್ ಪ್ರದೇಶದ ಸುತ್ತಮುತ್ತಲಿರುವ ಶಾಲಾ ಮತ್ತು ಕಾಲೇಜುಗಳನ್ನು ಬಂದ್ ಮಾಡಿಸಲಾಗಿದೆ. ಅಲ್ಲದೆ, ಉತ್ತರ ಕಾಶ್ಮೀರ ಬಾರಾಮುಲ್ಲಾ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳಉ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com