ಉಪರಾಷ್ಟ್ರಪತಿಯಾಗಿ ಆಯ್ಕೆಗೊಂಡಿರುವ ವೆಂಕಯ್ಯ ನಾಯ್ಡು ಅವರಿಗೆ ಅಭಿನಂದನೆಗಳು, ಅತ್ಯುತ್ತಮ ಅಧಿಕಾರಾವಧಿ ಅವರದ್ದಾಗಿರಲಿ ಎಂದು ಶುಭಕೋರುವುದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ರಾಷ್ಟ್ರದ ಅಭಿವೃದ್ಧಿಗೆ ಬದ್ಧವಾಗಿ ಪರಿಶ್ರಮ ಶ್ರದ್ಧಾಪೂರ್ವಕ ಸೇವೆ ಸಲ್ಲಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದಿರುವ ಮೋದಿ, ವೆಂಕಯ್ಯ ನಾಯ್ಡು ಅವರೊಂದಿಗೆ ಕಾರ್ಯನಿರ್ವಹಿಸಿದ ನೆನಪುಗಳನ್ನು ಹಂಚಿಕೊಂಡಿದ್ದಾರೆ.