ಜಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಅಲ್ಪಸಂಖ್ಯಾತ ಸ್ಥಾನಮಾನಕ್ಕೆ ಕತ್ತರಿ!

ಕೇಂದ್ರದ ಜಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯಕ್ಕೆ ನೀಡಲಾಗಿರುವ ಅಲ್ಪಸಂಖ್ಯಾತ ಸ್ಥಾನಮಾನ ಶೀಘ್ರವೇ ಕಳಚಿ ಬೀಳಲಿದೆ.
ಜಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ
ಜಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ
ನವದೆಹಲಿ: ಕೇಂದ್ರದ ಜಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯಕ್ಕೆ ನೀಡಲಾಗಿರುವ ಅಲ್ಪಸಂಖ್ಯಾತ ಸ್ಥಾನಮಾನ ಶೀಘ್ರವೇ ಕಳಚಿ ಬೀಳಲಿದೆ. 
ಮಾನವ ಸಂಪನ್ಮೂಲ ಇಲಾಖೆ ಈ ಸಂಬಂಧ ಪ್ರಮಾಣ ಪತ್ರ ಸಲ್ಲಿಸಲಿದ್ದು, ಜಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಕೇಂದ್ರ ಸರ್ಕಾರ ಸಂಸತ್ ಕಾಯ್ದೆಯ ಪ್ರಕಾರ ಸ್ಥಾಪಿಸಿದ್ದು, ಹಣಕಾಸಿನ ನೆರವನ್ನೂ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ವಿವಿಗೆ ನೀಡಲಾಗಿರುವ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ತಪ್ಪು ಎಂದು ಪ್ರಮಾಣ ಪತ್ರ ಸಲ್ಲಿಸಲಿದೆ ಎಂದು ತಿಳಿದುಬಂದಿದೆ. 
ಅಲ್ಪಸಂಖ್ಯಾತ ಶೈಕ್ಷಣಿಕ ಸಂಸ್ಥೆಗಳ ರಾಷ್ಟ್ರೀಯ ಆಯೋಗದ 2011ರ ಫೆ.22 ರಂದು ಹೊರಡಿಸಿರುವ ಆದೇಶಕ್ಕೆ ಮಾನವ ಸಂಪನ್ಮೂಲ ಇಲಾಖೆ ತನ್ನ ಬೆಂಬಲವನ್ನು ಹಿಂಪಡೆಯಲಿದ್ದು, ಜಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಅಲ್ಪಸಂಖ್ಯಾತ ವಿಶ್ವವಿದ್ಯಾನಿಲಯವಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಕೆ ಮಾಡಲಿದೆ. ಸ್ಮೃತಿ ಇರಾನಿ ಮಾನವ ಸಂಪನ್ಮೂಲ ಇಲಾಖೆ ಸಚಿವೆಯಾಗಿದ್ದಾಗ ಸರ್ಕಾರ ಜಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಅಲ್ಪಸಂಖ್ಯಾತ ಸ್ಥಾನಮಾನ ಹಿಂಪಡೆಯಲು ಚಿಂತನೆ ನಡೆಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com