ಮುಂಬೈನಲ್ಲಿ ಮೂವರು ಶಂಕಿತ ಉಗ್ರರ ಬಂಧನ, ಅಪಾರ ಪ್ರಮಾಣದ ಸ್ಫೋಟಕ ವಶ!

ಮಹತ್ವದ ಕಾರ್ಯಾಚರಣೆಯಲ್ಲಿ ಮುಂಬೈ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದು, ಬಂಧಿತರಿಂದ ಬರೊಬ್ಬರಿ 15 ಕೆಜಿ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ಮಹತ್ವದ ಕಾರ್ಯಾಚರಣೆಯಲ್ಲಿ ಮುಂಬೈ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದು, ಬಂಧಿತರಿಂದ ಬರೊಬ್ಬರಿ 15 ಕೆಜಿ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈನ ಥಾಣೆಯ ಕೌಸಾ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಕುರಿತು ಮಾಹಿತಿ ಪಡೆದಿದ್ದ ಎಟಿಎಸ್ ಅಧಿಕಾರಿಗಳು, ಇಂದು ಬೆಳಗ್ಗೆ ದಾಳಿ ಮಾಡಿದ್ದಾರೆ. ಈ ವೇಳೆ ಮೂವರು ಶಂಕಿತ ಉಗ್ರರರನ್ನು ಬಂಧಿಸಿದ್ದು,  ಬಂಧಿತರಿಂದ 9 ಡಿಟೋನೇಟರ್ ಗಳು ಹಾಗೂ ಬರೊಬ್ಬರಿ 15 ಕೆಜಿ ತೂಕದ ಅಮೋನಿಯಂ ನೈಟ್ರೇಟ್ ಸ್ಫೋಟರವನ್ನು ವಶಪಡಿಸಿಕೊಂಡಿದ್ದಾರೆ. ಈಗ್ಗೆ ಕೆಲ ದಿನಗಳ ಹಿಂದಷ್ಟೇ ಮುಂಬೈ ಎಟಿಎಸ್ ಗೆ ರಾಜ್ಯದ ಹಲವೆಡೆ ಬಾಂಬ್  ದಾಳಿ ಮಾಡುವ ಕುರಿತು ಬೆದರಿಕೆ ಪತ್ರವೊಂದು ಬಂದಿತ್ತು.

ಇದೀಗ ಈ ಮೂವರು ಶಂಕಿತ ಉಗ್ರರ ಬಂಧನದೊಂದಿಗೆ ಈ ಆತಂಕ ಕೊಂಚ ಕಡಿಮೆಯಾಗಿದೆಯಾದರೂ ಮತ್ತಷ್ಟು ಉಗ್ರರು ಅವಿತಿರುವ ಕುರಿತೂ ಶಂಕೆ ವ್ಯಕ್ತವಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಇದ್ದು,  ಸ್ವತಂತ್ರ್ಯ ದಿನಕ್ಕೆ ಅಡ್ಡಿಪಡಿಸಲೆಂದೇ ಉಗ್ರರು ದಾಳಿಗೆ ಸಂಚು ರೂಪಿಸಿದ್ದಾರೆ ಎಂದು ಈ ಹಿಂದೆ ಗುಪ್ತಚರ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com