ಅತ್ಯಾಚಾರ ಪ್ರಕರಣ: ಕೇರಳ ಕಾಂಗ್ರೆಸ್ ಶಾಸಕ ವಿನ್ಸೆಂಟ್‌ ಜಾಮೀನು ಅರ್ಜಿ ವಜಾ

ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಜೈಲು ಪಾಲಾಗಿರುವ ಕೇರಳದ ಕಾಂಗ್ರೆಸ್‌ ಪಕ್ಷದ ಶಾಸಕ ಎಂ. ವಿನ್ಸೆಂಟ್‌ ಅವರ....
ಎಂ ವಿನ್ಸೆಂಟ್
ಎಂ ವಿನ್ಸೆಂಟ್
ತಿರುವನಂತಪುರಂ: ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಜೈಲು ಪಾಲಾಗಿರುವ ಕೇರಳದ ಕಾಂಗ್ರೆಸ್‌ ಪಕ್ಷದ ಶಾಸಕ ಎಂ. ವಿನ್ಸೆಂಟ್‌ ಅವರ ಜಾಮೀನು ಅರ್ಜಿಯನ್ನು ಸೋಮವಾರ ಕೇರಳ ಕೋರ್ಟ್ ವಜಾಗೊಳಿಸಿದೆ.
ಜಾಮೀನು ಕೋರಿ ಎಂ. ವಿನ್ಸೆಂಟ್‌ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರುವನಂತಪುರಂ ಜಿಲ್ಲಾ ಮತ್ತು ಸೆಸೆನ್ಸ್ ಕೋರ್ಟ್ ಇಂದು ವಜಾಗೊಳಿಸಿದೆ. 
ಆರೋಪಿ ಪ್ರಭಾವಿಯಾಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ಹೀಗಾಗಿ ಜಾಮೀನು ನೀಡಬೇಡಿ ಎಂಬ ಸರ್ಕಾರಿ ಅಭಿಯೋಜಕರ ವಾದವನ್ನು ಕೋರ್ಟ್ ಎತ್ತಿ ಹಿಡಿದಿದೆ.
ಕಳೆದ ಜುಲೈ 22ರಂದು ಮಹಿಳೆ ಮೇಲೆ ಅತ್ಯಾಚಾರ, ಮಹಿಳೆಯನ್ನು ಹಿಂಬಾಲಿಸಿದ ಹಾಗೂ ಆತ್ಮಹತ್ಯೆ ಯತ್ನಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ವಿನ್ಸೆಂಟ್ ಅವರನ್ನು ಕೇರಳ ಪೊಲೀಸ್‌ ಇಲಾಖೆಯ ವಿಶೇಷ ತನಿಖಾ ತಂಡ(ಎಸ್‌ಐಟಿ) ಬಂಧಿಸಿದೆ.
ಈ ಮೊದಲು ಮಹಿಳೆ ಆತ್ಮಹತ್ಯೆ ಯತ್ನಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ತನಿಖೆಯನ್ನು ಎಸ್‌ಐಟಿಗೆ ವಹಿಸಿದ ಬಳಿಕ ಸಂತ್ರಸ್ತ ಮಹಿಳೆಯ ಹೇಳಿಕೆಯನ್ನು ಆಧರಿಸಿ ವಿನ್ಸೆಂಟ್‌ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಸಂತ್ರಸ್ತ ಮಹಿಳೆ ನಿದ್ರೆ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದರು. ವಿನ್ಸೆಂಟ್‌ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ಎಸ್‌ಐಟಿ ಮುಂದೆ ಹೇಳಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com