ಎನ್ ಕೌಂಟರ್ ಕುರಿತಂತೆ ಪ್ರತಿಕ್ರಿಯೆ ನೀಡಿರುವ ವೈದ್ ಅವರು, 2-3 ಉಗ್ರರು ಸಂಬೂರಾ ಪ್ರದೇಶದಲ್ಲಿ ತಮ್ಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ನಂತರ ಅವಂತಿಪುರ ಪೊಲೀಸ್ ಹಾಗೂ ಕೇಂದ್ರೀಯ ಸಶಸ್ತ್ರ ಮೀಸಲು ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿಯಿತು. ಗುಂಡಿನ ಕಾಳಗದಲ್ಲಿ ಇಬ್ಬರಿಗೆ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.