ಯುವತಿಯ ಹಿಂಬಾಲಿಸಿದ ಪ್ರಕರಣ: ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸುಭಾಷ್ ಬರಾಲಾ ರಾಜಿನಾಮೆ ನೀಡಲ್ಲ; ಬಿಜೆಪಿ

ಹರಿಯಾಣದ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್ ಬರಾಲಾ ಐಎಎಸ್ ಅಧಿಕಾರಿಯೊಬ್ಬರ ಪುತ್ರಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ...
ಸುಭಾಷ್ ಬರಾಲಾ
ಸುಭಾಷ್ ಬರಾಲಾ
ಚಂಢಿಗಡ್: ಹರಿಯಾಣದ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್ ಬರಾಲಾ ಐಎಎಸ್ ಅಧಿಕಾರಿಯೊಬ್ಬರ ಪುತ್ರಿಯನ್ನು ಹಿಂಬಾಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಭಾಷ್ ಬರಾಲಾ ರಾಜಿನಾಮೆ ನೀಡುವುದಿಲ್ಲ ಎಂದು ರಾಜ್ಯ ಬಿಜೆಪಿ ಸ್ಪಷ್ಟಪಡಿಸಿದೆ. 
ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್ ಬರಾಲಾ ಈ ಕೃತ್ಯ ಎಸಗಿರುವುದರಿಂದ ಆತನ ವಿರುದ್ಧ ಕಾನೂನಿನಂತೆ ಕ್ರಮ ಕೈಗೊಳ್ಳಲಾಗುವುದು ಆದ್ದರಿಂದ ಸುಭಾಷ್ ಬರಾಲಾ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಿಲ್ಲ ಎಂದು ಬಿಜೆಪಿ ಮೂಲಗಳು ಸ್ಫಷ್ಟಪಡಿಸಿವೆ. 
ಇನ್ನು ತಮ್ಮ ವಿರುದ್ಧ ಹಲವು ಮಹಿಳಾ ಸಂಘಟನೆಗಳು, ಬಿಜೆಪಿಯ ಸಂಸದರೇ ಧ್ವನಿ ಎತ್ತಿದ್ದರಿಂದ ಸುಭಾಷ್ ಬರಾಲಾ ಅವರು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ನಂತರ ಮಾತನಾಡಿದ ಮನೋಹರ್ ಲಾಲ್ ಖಟ್ಟರ್ ಅವರು ಪ್ರಕರಣದಲ್ಲಿ ಸುಭಾಷ್ ಬರಾಲಾ ಅವರ ಯಾವುದೇ ಒಳಗೊಳ್ಳುವಿಕೆ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇನ್ನು ಪ್ರಕರಣ ಸಂಬಂಧ ಆರೋಪ ಸಾಬೀತಾದರೆ ಆರೋಪಿಗೆ ಶಿಕ್ಷೆಯಾಗಲಿದೆ ಎಂದರು. 
ಇನ್ನು ವಿಕಾಸ್ ಬರಾಲಾ ವಿರುದ್ಧ ಚಂಢಿಗಡ ಪೊಲೀಸರು ಐಪಿಸಿ ಸೆಕ್ಷನ್ 354ಡಿ(ಹಿಂಬಾಲಿಸುವಿಕೆ) ಅಡಿಯಲ್ಲಿ ದೂರು ದಾಖಲಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com