ಪ್ರಧಾನಿ ನರೇಂದ್ರ ಮೋದಿ
ದೇಶ
ಬಡವರಿಗೆ ನೀಡಲಾಗುತ್ತಿರುವ ಎಲ್‌ಪಿಜಿ ಸಬ್ಸಿಡಿ ಮುಂದುವರಿಕೆ: ಧರ್ಮೆಂದ್ರ ಪ್ರಧಾನ್
ಬಡ ಕುಟುಂಬಗಳಿಗೆ ನೀಡಲಾಗುತ್ತಿರುವ ಎಲ್‌ಪಿಜಿ ಸಬ್ಸಿಡಿಯನ್ನು ಮುಂದುವರೆಸಲಾಗುತ್ತದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೆಂದ್ರ ಪ್ರಧಾನ್ ಹೇಳಿದ್ದಾರೆ....
ನವದೆಹಲಿ: ಬಡ ಕುಟುಂಬಗಳಿಗೆ ನೀಡಲಾಗುತ್ತಿರುವ ಎಲ್‌ಪಿಜಿ ಸಬ್ಸಿಡಿಯನ್ನು ಮುಂದುವರೆಸಲಾಗುತ್ತದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೆಂದ್ರ ಪ್ರಧಾನ್ ಹೇಳಿದ್ದಾರೆ.
ಅಗರ್ತಲದಲ್ಲಿ ಮಾತನಾಡಿದ ಧರ್ಮೆಂದ್ರ ಪ್ರಧಾನ್ ಅವರು ಸಾಮಾನ್ಯ ಜನ ಮತ್ತು ಬಡವರಿಗೆ ಗೃಹ ಬಳಕೆಯ ಎಲ್‌ಪಿಜಿ ಮತ್ತು ಸೀಮೆಎಣ್ಣೆ ಮೇಲಿನ ಸಬ್ಸಿಡಿಯನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದ್ದಾರೆ.
ಅಡುಗೆ ಅನಿಲ್ ಸಿಲಿಂಡರ್(ಎಲ್‌ಪಿಜಿ)ಗಳಿಗೆ ನೀಡಲಾಗುತ್ತಿರುವ ಸಬ್ಸಿಡಿಯನ್ನು ಮುಂದಿನ ವರ್ಷದಿಂದ ರದ್ದುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಆದರೆ ಇದೀಗ ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್ ಅವರು ಬಡವರಿಗೆ ನೀಡಲಾಗುತ್ತಿರುವ ಸಬ್ಸಿಡಿಯನ್ನು ಮುಂದುರವೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ