ಅಡ್ಡ ಮತದಾನ ಮಾಡಿದ್ದ ಕೈ ಶಾಸಕರ ಮತ ಅಸಿಂಧು: ಶೀಘ್ರವೇ ಮತ ಎಣಿಕೆ ಕಾರ್ಯ ಪ್ರಾರಂಭ

ಗುಜರಾತ್ ರಾಜ್ಯಸಭಾ ಚುನಾವಣೆಯಲ್ಲಿ ಹಲವು ನಾಟಕೀಯ ಬೆಳವಣಿಗೆಗಳ ನಂತರ ಚುನಾವಣಾ ಆಯೋಗ ಇಬ್ಬರು ಕಾಂಗ್ರೆಸ್ ಶಾಸಕರ ಮತವನ್ನು ಅನೂರ್ಜಿತಗೊಳಿಸಿದೆ.
ಚುನಾವಣಾ ಆಯೋಗ
ಚುನಾವಣಾ ಆಯೋಗ
ಅಹಮದಾಬಾದ್: ಗುಜರಾತ್ ರಾಜ್ಯಸಭಾ ಚುನಾವಣೆಯಲ್ಲಿ ಹಲವು ನಾಟಕೀಯ ಬೆಳವಣಿಗೆಗಳ ನಂತರ ಚುನಾವಣಾ ಆಯೋಗ ಇಬ್ಬರು ಕಾಂಗ್ರೆಸ್ ಶಾಸಕರ ಮತವನ್ನು ಅನೂರ್ಜಿತಗೊಳಿಸಿದೆ. 
ರಾತ್ರಿ 11:30 ಕ್ಕೆ ಚುನಾವಣಾ ಆಯೋಗ ಕಾಂಗ್ರೆಸ್  ಶಾಸಕರ ಮತಗಳನ್ನು ಅಸಿಂಧು ಎಂದು ಪ್ರಕಟಿಸಿದೆ. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಇಬ್ಬರು ಶಾಸಕರು ಅಡ್ಡಮತದಾನ ಮಾಡಿದ್ದರು. ಈ ಬಗ್ಗೆ ಕಾಂಗ್ರೆಸ್ ಚುನಾವಣಾ ಆಯೋಗದ ಮೊರೆ ಹೋಗಿ 2 ಶಾಸಕರ ಮತಗಳನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮತ ಎಣಿಕೆ ಕಾರ್ಯ ವಿಳಂಬವಾಗಿತ್ತು. 
ಪ್ರಾರಂಭದಲ್ಲಿ ಕಾಂಗ್ರೆಸ್ ಮನವಿಯನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ ಎಂಬ ವರದಿಗಳು ಪ್ರಕಟವಾಗಿತ್ತಾದರೂ ರಾತ್ರಿ 11:30 ಕ್ಕೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದ್ದು ಅಡ್ಡ ಮತದಾನ ಮಾಡಿದ್ದ ಕೈ ಶಾಸಕರ ಮತ ಅಸಿಂಧುಗೊಳಿಸಲಾಗುವುದು ಎಂದು ತಿಳಿಸಿದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com