ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಓರ್ವ ಯೋಧನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧನಿಗೆ ಗಾಯವಾಗಿರುವುದಾಗಿ ಮಂಗಳವಾರ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧನಿಗೆ ಗಾಯವಾಗಿರುವುದಾಗಿ ಮಂಗಳವಾರ ತಿಳಿದುಬಂದಿದೆ. 
ಉರಿ ಸೆಕ್ಟರ್ ನಲ್ಲಿರುವ ಭಾರತೀಯ ಸೇನಾಪಡೆಗಳ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ. ಪರಿಣಾಮ ಓರ್ವ ಯೋಧನಿಗೆ ಗಾಯವಾಗಿದೆ ಎಂದು ಸೇನಾಧಿಕಾರಿಗಳು ಹೇಳಿದ್ದಾರೆ. 
ಗಾಯಗೊಂಡ ಯೋಧನನ್ನು ಸೇನಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಪಾಕಿಸ್ತಾನದ ಸೇನೆಯ ದಾಳಿಗೆ ಭಾರತೀಯ ಸೇನೆ ಕೂಡ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com