ದೇಶ

ಭಾರತ, ಆಫ್ಘಾನಿಸ್ತಾನದ ಜೊತೆಗೆ ಮಾತುಕತೆ ನಡೆಸಲು ಸಿದ್ಧವಿದ್ದೇವೆ: ಪಾಕ್ ಪ್ರಧಾನಿ ಅಬ್ಬಾಸಿ

ಪಾಕಿಸ್ತಾನ ರಾಷ್ಟ್ರೀಯ ಹಿಸಾಸಕ್ತಿಗಳೊಂದಿಗೆ ರಾಜಿಯಾಗದೆ ಭಾರತ ಮತ್ತು ಆಫ್ಘಾನಿಸ್ತಾನ ರಾಷ್ಟ್ರಗಳೊಂದಿಗೆ ಎಲ್ಲಾ ರೀತಿಯ ವಿಚಾರಗಳ ಕುರಿತಂತೆ ಮಾತುಕತೆ ನಡೆಸಲು ಸಿದ್ಧರಿದ್ದೇವೆಂದು ಪಾಕಿಸ್ತಾನ ಪ್ರಧಾನಮಂತ್ರಿ ಶಾಹಿದ್ ಖಾಕನ್...

ಭಾರತ, ಆಫ್ಘಾನಿಸ್ತಾನದ ಜೊತೆಗೆ ಮಾತುಕತೆ ನಡೆಸಲು ಸಿದ್ಧವಿದ್ದೇವೆ: ಪಾಕ್ ಪ್ರಧಾನಿ ಅಬ್ಬಾಸಿ
ಪ್ರಧಾನಮಂತ್ರಿ ಶಾಹಿದ್ ಖಾಕನ್ ಅಬ್ಬಾಸಿ
Published On :
ಇಸ್ಲಾಮಾಬಾದ್: ಪಾಕಿಸ್ತಾನ ರಾಷ್ಟ್ರೀಯ ಹಿಸಾಸಕ್ತಿಗಳೊಂದಿಗೆ ರಾಜಿಯಾಗದೆ ಭಾರತ ಮತ್ತು ಆಫ್ಘಾನಿಸ್ತಾನ ರಾಷ್ಟ್ರಗಳೊಂದಿಗೆ ಎಲ್ಲಾ ರೀತಿಯ ವಿಚಾರಗಳ ಕುರಿತಂತೆ ಮಾತುಕತೆ ನಡೆಸಲು ಸಿದ್ಧರಿದ್ದೇವೆಂದು ಪಾಕಿಸ್ತಾನ ಪ್ರಧಾನಮಂತ್ರಿ ಶಾಹಿದ್ ಖಾಕನ್ ಅಬ್ಬಾಸಿ ಮಂಗಳವಾರ ಹೇಳಿದ್ದಾರೆ. 
ಪಾಕಿಸ್ತಾನದ ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಅವರು, ಸಮಾನತೆಯ ಆಧಾರದ ಮೇಲೆ  ಭಾರತವಾಗಲೀ ಅಥವಾ ಆಫ್ಘಾನಿಸ್ತಾನವಾಗಲೀ ಯಾವುದೇ ರಾಷ್ಟ್ರದ ಜೊತೆಗಾದರೂ ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆಂದು ಹೇಳಿದ್ದಾರೆ. 
ಇದೇ ವೇಳೆ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ನವಾಜ್ ಷರೀಫ್ ಅವರಿಗೆ ಸರ್ಕಾರ ಭದ್ರತೆಯನ್ನು ನೀಡುತ್ತಿದೆ ಎಂಬ ವರದಿಗಳಿಗೆ ಸ್ಪಷ್ಟನೆ ನೀಡಿರುವ ಅವರು, ಒಬ್ಬ ರಾಜಕೀಯ ನಾಯಕನಗೆ ಭದ್ರತೆ ನೀಡುವುದು ಸರ್ಕಾರದ ಕರರ್ತವ್ಯ ಎಂದು ತಿಳಿಸಿದ್ದಾರೆ. 
ಕರಾಚಿಯಲ್ಲಿ ಶಾಂತಿ ಸ್ಥಾಪನೆಯಿಲ್ಲದೆಯೇ ಪಾಕಿಸ್ತಾನ ಪ್ರಗತಿಗೊಳ್ಳಲು ಸಾಧ್ಯವಿಲ್ಲ. ಪಕ್ಷ ಎಲ್ಲಿಯವರೆಗೂ ನನಗೆ ಬೆಂಬಲ ನೀಡುತ್ತದೆಯೇ ಅಲ್ಲಿಯವರೆಗೂ ದೇಶದ ಪ್ರಧಾನಿಯಾಗಿ ಮುಂದುವರೆಯುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.