ಚೆನ್ನೈ: ರೈಲು ನಿಲ್ದಾಣದಲ್ಲಿ ಪ್ರಯಾಣಿಕನ ದರೋಡೆ ಮಾಡಿದ ಮೂವರು ಪೊಲೀಸರ ಬಂಧನ

ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ ಪ್ರಯಾಣಿಕರೊಬ್ಬರ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಚೆನ್ನೈ: ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿ, ದರೋಡೆ ಮಾಡಿದ ಆರೋಪದ ಮೇಲೆ ಮೂವರು ಪೊಲೀಸ್ ಪೇದೆಗಳನ್ನು ಮಂಗಳವಾರ ಬಂಧಿಸಲಾಗಿದೆ.
ಒಡಿಶಾ ಮೂಲದ ಪ್ರಯಾಣಿಕರ ಬಿಸ್ವನಾಥನ್ ಎಂಬುವವರು ಪೊಲೀಸರ ವಿರುದ್ಧ ದೂರು ನೀಡಿದ್ದು, ಸೋಮವಾರ ಬೆಳಗಿನ ಜಾವ ವೇಟಿಂಗ್ ಹಾಲ್ ನಲ್ಲಿ ಮಲಗಿದ್ದಾಗ ಅಲ್ಲಿಗೆ ಬಂದ ಕರ್ತವ್ಯದಲ್ಲಿದ್ದ ಈ ಮೂವರು ಪೊಲೀಸರು ತನ್ನನ್ನು ಎಬ್ಬಿಸಿ, ತನ್ನ ಮೇಲೆ ಹಲ್ಲೆ ನಡೆಸಿದ್ದಲ್ಲದೆ ತನ್ನ ಬಳಿ ಇದ್ದ 1500 ರುಪಾಯಿ ನಗದು ಹಾಗೂ 1000 ಮೌಲ್ಯದ ಒಂದು ಕೈಗಡಿಯಾರವನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ್ದಾನೆ.
ಪ್ರಕರಣ ದಾಖಲಿಸಿಕೊಂಡ ರೈಲ್ವೆ ಪೊಲೀಸರು ಮೂವರು ಪೊಲೀಸ್ ಪೇದೆಗಳನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಆರೋಪಿ ಪೊಲೀಸರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ದೂರುದಾರ ಆರೋಪಿ ಪೊಲೀಸರನ್ನು ಗುರುತಿಸಿದ ನಂತರ ನಾವು ಅವರನ್ನು ಬಂಧಿಸಿದ್ದೇವೆ ಎಂದು ಹಿರಿಯ ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಂಧಿತ ಪೊಲೀಸರನ್ನು ಜೆ ಇರುತಾಯರಾಜ್(24), ಜೆ ಅರುಲ್ಡಾಸ್(28) ಮತ್ತು ಎಸ್ ರಾಮಕೃಷ್ಣ(26) ಎಂದು ಗುರುತಿಸಲಾಗಿದ್ದು, ಈ ಮೂವರು ತಮಿಳುನಾಡು ವಿಶೇಷ ಪೊಲೀಸ್ ಘಟಕದಲ್ಲಿ ಕೆಲಸ ಮಾಡುತ್ತಿದ್ದು, ಕಳೆದು ಒಂದೂವರೆ ತಿಂಗಳ ಹಿಂದೆಯೇ ನಗರದ ಮುಖ್ಯ ರೈಲ್ವೆ ನಿಲ್ದಾಣದ ಭದ್ರತೆಗೆ ನಿಯೋಜಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com