ಕೋಲ್ಕತಾ: ಚಾಚಾ ಎಂದೇ ಖ್ಯಾತರಾಗಿದ್ದ ಹಿರಿಯ ಕಾಂಗ್ರೆಸ್ ಶಾಸಕ ಗ್ಯಾನ್ ಸಿಂಗ್ ಸೋಹನ್ಪಾಲ್ ಅವರು ಮಂಗಳವಾರ ಕೋಲ್ಕತಾದ ಎಸ್ಎಸ್ ಕೆಎಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಅವಿವಾಹಿತರಾಗಿದ್ದ 92 ವರ್ಷದ ಗ್ಯಾನ್ ಸಿಂಗ್ ಅವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾಗಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆಗೆ 10 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಗ್ಯಾನ್ ಸಿಂಗ್ ಅವರು ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ರಾಜಕೀಯ ವಲಯದಲ್ಲಿ ಅವರಿಗೆ ಅಪಾರ ಗೌರವವಿತ್ತು.
ಹಿರಿಯ ಕಾಂಗ್ರೆಸ್ ಶಾಸಕನ ನಿಧನಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೀವ್ರ ಸಂತಾಪ ಸೂಚಿಸಿದ್ದು, ನಾವು ಒಬ್ಬ ಹಿರಿಯ ಶಾಸಕರನ್ನು ಕಳೆದುಕೊಂಡಿದ್ದೇವೆ ಎಂದಿದ್ದಾರೆ.