ಮೇದಿನಿಪುರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಮೇಲೆ ಸವಾರಿ ಮಾಡುತ್ತಿದೆ ಎಂದು ಆರೋಪಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ದೇಶದಿಂದ ಹೊರ ಹಾಕಲು ಎಲ್ಲಾ ಪ್ರತಿಪಕ್ಷಗಳೊಂದಿಗೆ ಟಿಎಂಸಿ ಕೈಜೋಡಿಸಲಿದೆ ಎಂದು ಬುಧವಾರ ಹೇಳಿದ್ದಾರೆ.