ಲಖನೌ: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷ(ಎಸ್ಪಿ)ದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದ ಸರ್ಕಾರದಲ್ಲಿ ಪೊಲೀಸರನ್ನು ತಮ್ಮ ಹಿತಾಸಕ್ತಿಗಾಗಿ ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪವನ್ನು ಮಾಡಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಖಿಲೇಶ್ ಯಾದವ್ ಸರ್ಕಾರ ಮತ್ತು ಪೊಲೀಸರು ಒಟ್ಟಾಗಿ ಕೆಲಸ ಮಾಡುತ್ತಾರೆ. ಹೀಗಾಗಿ ಜನರು ಮಾಡದೇ ಇರುವ ತಪ್ಪುಗಳಿಗಾಗಿ ಪೊಲೀಸರು ಅವರನ್ನು ಆರೋಪಿಗಳನ್ನಾಗಿ ಮಾಡುತ್ತಾರೆ ಎಂದು ಹೇಳಿದ್ದಾರೆ.
ಸಮಾಜವಾದಿ ಪಕ್ಷ ನೇತೃತ್ವದ ಸರ್ಕಾರದ ಅವಧಿಯಲ್ಲಿ ಪೊಲೀಸರು ಹೆಚ್ಚು ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದರು. ಉತ್ತಮ ಕಾರ್ಯದಕ್ಷತೆಯ ಫಲವಾಗಿ ಕೆಲ ಗೌರವಗಳನ್ನು ಸ್ವೀಕರಿಸಿದ್ದರು ಎಂದು ಅಖಿಲೇಶ್ ಹೇಳಿದ್ದಾರೆ.