ಕಾರ್ತಿ ಚಿದಂಬರಂ ವಿರುದ್ಧದ ಲುಕ್ ಔಟ್ ನೋಟೀಸ್ ಗೆ ಮದ್ರಾಸ್ ಹೈಕೋರ್ಟ್ ತಡೆ

ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ವಿರುದ್ಧದ ಲುಕ್ ಔಟ್ ನೋಟಿಸ್....
ಕಾರ್ತಿ ಚಿದಂಬರಂ
ಕಾರ್ತಿ ಚಿದಂಬರಂ
ಚೆನ್ನೈ: ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ವಿರುದ್ಧದ ಲುಕ್ ಔಟ್ ನೋಟಿಸ್ ಗೆ ಗುರುವಾರ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧ ಸಿಬಿಐ ಜಾರಿಗೊಳಿಸಿದ್ದ ಲುಕ್ ಔಟ್ ನೋಟಿಸ್ ಗೆ ತಡೆ ಕೋರಿ ಕಾರ್ತಿ ಚಿದಂಬರಂ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಸೆಪ್ಟೆಂಬರ್ 4ರ ವರೆಗೆ ಲುಕ್ ಔಟ್ ನೋಟಿಸ್ ಗೆ ತಡೆ ನೀಡಿದೆ ಎಂದು ಎಎನ್ಐ ವರದಿ ಮಾಡಿದೆ
ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿಯಮಗಳ ಉಲ್ಲಂಘನೆಯ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂ ಅವರ ವಿರುದ್ಧ ಸಿಬಿಐ ಪಾಸ್ ಪೋರ್ಟ್ ಕಾಯ್ದೆಯ ಸೆಕ್ಷೆನ್ 10ಬಿ ಅಡಿ ಲುಕ್ ಔಟ್ ನೋಟಿಸ್ ಜಾರಿ ಮಾಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com