ಪರಿಸರವಾದಿ ಎಂ.ಸಿ ಮೇಹ್ತಾ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಬಿ ಲೋಕುರ್ ನೇತೃತ್ವದ ಸುಪ್ರೀಂ ಪೀಠ, ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಎಲ್ಲಾ ಪೆಟ್ರೋಲ್ ಬಂಕ್ ಗಳಲ್ಲೂ ಪಿಯುಸಿ ಕೇಂದ್ರಗಳನ್ನು ಸ್ಥಾಪಿಸುವಂತೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಸೂಚಿಸಿದೆ. ಅಲ್ಲದೆ ಇದಕ್ಕಾಗಿ ನಾಲ್ಕು ವಾರಗಳ ಕಾಲವಕಾಶ ನೀಡಿದೆ.