ನವದೆಹಲಿ: ಭಾರತೀಯ ಜನತಾಪಕ್ಷ(ಬಿಜೆಪಿ)ದ ರಾಷ್ಟ್ರಧ್ಯಕ್ಷರಾಗಿ ಅಮಿತ್ ಶಾ ಮೂರು ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.
ಅಮಿತ್ ಶಾ ಅವರು ರಾಷ್ಟ್ರಧ್ಯಕ್ಷರಾಗಿ ಮೂರು ವರ್ಷ ಪೂರೈಸಿದ್ದು ಮತ್ತು ರಾಜ್ಯಸಭಾ ಸದಸ್ಯರಾಗಿ ಇದೇ ಮೊದಲ ಬಾರಿಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಮಿತ್ ಶಾರನ್ನು ಪ್ರಶಂಸಿಸಿದ್ದಾರೆ.
ಅಮಿತ್ ಶಾ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಮೇಲೆ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಿದ್ದಾರೆ. ಇನ್ನು ಹಲವು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಿದೆ. ಇದಕ್ಕೆ ರಾಷ್ಟ್ರಾಧ್ಯಕ್ಷರ ಚತುರತೆ ಕಾರಣ ಎಂದು ಹೇಳಿದ್ದಾರೆ.
ಗುಜರಾತ್ ರಾಜ್ಯದ ಮೂರು ರಾಜ್ಯಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಮಿತ್ ಶಾ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಕಾಂಗ್ರೆಸ್ ನ ಅಹ್ಮದ್ ಪಟೇಲ್ ಗೆಲುವು ಸಾಧಿಸಿದ್ದರು.