ನಾಶಿಕ್ : ಬಲೂನ್ ನುಂಗಿದ 8 ತಿಂಗಳ ಮಗು ದಾರುಣ ಸಾವು

ರಬ್ಬರ್ ಬಲೂನ್ ನುಂಗಿದ ಕಾರಣ ಉಸಿರಾಟಕ್ಕೆ ತೊಂದರೆಯಾಗಿ 8 ತಿಂಗಳ ಗಂಡು ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ನಾಶಿಕ್: ರಬ್ಬರ್ ಬಲೂನ್ ನುಂಗಿದ ಕಾರಣ ಉಸಿರಾಟಕ್ಕೆ ತೊಂದರೆಯಾಗಿ 8 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ನಾಶಿಕ್ ನ ಹನುಮಾನ್ ನಗರದ ಮನೆಯಲ್ಲಿ ಆಟವಾಡುತ್ತಿದ್ದ ಮಗು ನೆಲದ ಮೇಲೆ ಬಿದ್ದಿದ್ದ ಬಲೂನ್ ತೆಗೆದುಕೊಂಡು ನುಂಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಗುವನ್ನು ಪರೀಕ್ಷಿಸಿದ ವೈದ್ಯರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಮಗು ನುಂಗಿದ ಬಲೂನ್, ಉಸಿರಾಟದ ಪೈಪ್ ಗೆ ಜಾರಿದ್ದರಿಂದ ಉಸಿರುಗಟ್ಟಿ ಮಗು ಸಾವನ್ನಪ್ಪಿದೆ ಎಂದು ವೈದ್ಯರು ಹೇಳಿದ್ದಾರೆ.
ಅಂಬಾಡ್ ಪೊಲೀಸರು ಇದೊಂದು ಆಕಸ್ಮಿಕ ಸಾವಿನ ಪ್ರಕರಣ ಎಂದು ದೂರು ದಾಖಲಿಸಿಕೊಂಡಿದ್ದಾರೆ. ಮಗುವಿನ  ಪೋಷಕರು ಉತ್ತರ ಪ್ರದೇಶ ಮೂಲದವರಾಗಿದ್ದು, ನಾಸಿಕ್ ನಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com