ಪ್ರಮಾಣ ವಚನ ಸ್ವೀಕರಿಸಿದ ವೆಂಕಯ್ಯನಾಯ್ಡು
ಪ್ರಮಾಣ ವಚನ ಸ್ವೀಕರಿಸಿದ ವೆಂಕಯ್ಯನಾಯ್ಡು

ದೇಶದ 13ನೇ ಉಪ ರಾಷ್ಟ್ರಪತಿಯಾಗಿ ವೆಂಕಯ್ಯನಾಯ್ಡು ಪ್ರಮಾಣ ವಚನ ಸ್ವೀಕಾರ

ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ವೆಂಕಯ್ಯನಾಯ್ಡು ಅವರು ದೇಶದ 13ನೇ ಉಪ ರಾಷ್ಟ್ರಪತಿಗಳಾಗಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನವದೆಹಲಿ: ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ವೆಂಕಯ್ಯನಾಯ್ಡು ಅವರು ದೇಶದ 13ನೇ ಉಪ ರಾಷ್ಟ್ರಪತಿಗಳಾಗಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇಂದು ಬೆಳಗ್ಗೆ 10 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶದ 13ನೇ ಉಪರಾಷ್ಟ್ರಪತಿಗಳಾಗಿ ವೆಂಕಯ್ಯನಾಯ್ಜು ಅವರು ಪ್ರಮಾಣ ವಚನ ಸ್ವೀಕರಿಸಿದರು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು  ವೆಂಕಯ್ಯನಾಯ್ಡು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ದೇವರ ಹೆಸರಲ್ಲಿ ವೆಂಕಯ್ಯ ನಾಯ್ಡು ಅವರು ಪ್ರಮಾಣ ವಚನ ಸ್ವೀಕರಿಸಿದರು.

ಇನ್ನು ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ಅರುಣ್ ಜೇಟ್ಲಿ, ವಿಪಕ್ಷ ನಾಯಕರಾದ ಮನಮೋಹನ್ ಸಿಂಗ್ ಸೇರಿದಂತೆ ವಿವಿಧ ಪಕ್ಷಗಳ  ಗಣ್ಯರು, ಸರ್ಕಾರದ ವಿವಿಧ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಜರಿದ್ದರು.

68 ವರ್ಷ ಹಿರಿಯ ರಾಜಕಾರಣಿ ಇತ್ತೀಚೆಗೆ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಮೈತ್ರೀಕೂಟದ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಅವರ ವಿರುದ್ದಧ ಗೆಲುವು ಸಾಧಿಸಿ, ಉಪ ರಾಷ್ಟ್ಪಪತಿ ಹುದ್ದೆಗೇರಿದ್ದಾರೆ. ಈ ಹಿಂದೆ  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದಲ್ಲಿ ಮಾಹಿತಿ ಮತ್ತು ಪ್ರಸಾರ ಖಾತೆಯ ಸಚಿವರಾಗಿ ನಾಯ್ಡು ಕಾರ್ಯ ನಿರ್ವಹಿಸಿದ್ದರು.

Related Stories

No stories found.

Advertisement

X
Kannada Prabha
www.kannadaprabha.com