ತಮಿಳುನಾಡು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಕಾಮುಕ ಶಿಕ್ಷಕನ ಬಂಧನ

8ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮಿಳುನಾಡು ಸರ್ಕಾರದ ಅನುದಾನಿತ ಪ್ರೌಢಶಾಲೆಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಇರೋಡ್: 8ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮಿಳುನಾಡು ಸರ್ಕಾರದ ಅನುದಾನಿತ ಪ್ರೌಢಶಾಲೆಯ ದೈಹಿಕ ಶಿಕ್ಷಣದ ಶಿಕ್ಷಕರನ್ನು ಬಂಧಿಸಲಾಗಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.
ಕಾಮುಕ ಶಿಕ್ಷಕನ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ವಿದ್ಯಾರ್ಥಿನಿ ಪೋಷಕರು ಸೇರಿದಂತೆ ಸುಮಾರು 200 ಜನ ಶಾಲೆ ಮುಂದೆ ಪ್ರತಿಭಟನೆ ನಡೆಸಿದ ನಂತರ ನಿನ್ನೆ ಇರೋಡ್ ಜಿಲ್ಲೆಯ ಭವಾನಿ ಸಮೀಪದ ಅಮ್ಮಪೇಟ್ ನಲ್ಲಿರುವ ಶಾಲೆಯ ಶಿಕ್ಷಕ 40 ವರ್ಷದ ಪ್ರಭು ಅವರನ್ನು ನಿನ್ನೆ ಬಂಧಿಸಲಾಗಿದೆ.
ಶಿಕ್ಷಣ ಇಲಾಖೆ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿ ಪ್ರಭು ಅವರನ್ನು ಸೇವೆಯಿಂದ ಅಮಾನತುಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಗಸ್ಟ್ 6ರಂದು ಪಕ್ಕದ ಜಿಲ್ಲೆ ತಿರುಪುರದಲ್ಲಿ ನಡೆದ ಪಂದ್ಯಾವಳಿಯಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ದೈಹಿಕ ಶಿಕ್ಷಕ ಬಸ್ ನಲ್ಲಿ ಶಾಲಾ ಕಬ್ಬಡಿ ತಂಡದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com