ಗೋರಕ್ ಪುರ ಆಸ್ಪತ್ರೆ ದುರಂತ: ಬಿಆರ್ ಡಿ ಕಾಲೇಜು ಪ್ರಾಂಶುಪಾಲರ ಅಮಾನತು, ಪ್ರಧಾನಿಯಿಂದ ಮೇಲ್ವಿಚಾರಣೆ

ಮಕ್ಕಳ ಸರಣಿ ಸಾವಿಗೆ ಕಾರಣವಾದ ಉತ್ತರ ಪ್ರದೇಶದ ಗೋರಕ್ ಪುರದಲ್ಲಿರುವ ಬಿಆರ್ ಡಿ ವೈದ್ಯಕೀಯ ಕಾಲೇಜು ಪ್ರಾಂಶುಪಾಲರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.
ಗೋರಕ್ ಪುರ ಆಸ್ಪತ್ರೆ
ಗೋರಕ್ ಪುರ ಆಸ್ಪತ್ರೆ
ಲಖನೌ: ಮಕ್ಕಳ ಸರಣಿ ಸಾವಿಗೆ ಕಾರಣವಾದ ಉತ್ತರ ಪ್ರದೇಶದ ಗೋರಕ್ ಪುರದಲ್ಲಿರುವ ಬಿಆರ್ ಡಿ ವೈದ್ಯಕೀಯ ಕಾಲೇಜು ಪ್ರಾಂಶುಪಾಲರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. 
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಾಂಶುಪಾಲ, ಅಮಾನತುಗೊಳಿಸುವ ಮುನ್ನವೇ ನಾನು ರಾಜೀನಾಮೆ ನೀಡಿದ್ದೇನೆ. ಮಕ್ಕಳ ಸಾವಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ ಎಂದು ಪ್ರಾಂಶುಪಾಲರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದೇ ವೇಳೆ ಸುದ್ದಿಗೋಷ್ಠಿ ನಡೆಸಿರುವ ವೈದ್ಯಕೀಯ ಶಿಕ್ಷಣ ಸಚಿವ ಅಶುತೋಷ್ ಟಂಡನ್, ಮಕ್ಕಳ ಸರಣಿ ಸಾವಿನ ಬಗ್ಗೆ ಪ್ರಧಾನ ಕಾರ್ಯದರ್ಶಿ ನೇತೃತ್ವದ ತನಿಖೆಗೆ ಆದೇಶಿಸಲಾಗಿದೆ, ವರದಿ ಬಂದ ಕೂಡಲೇ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. 
ಪ್ರಧಾನಿ ಮೇಲ್ವಿಚಾರಣೆ: 
ಗೋರಕ್ ಪುರದ ದುರ್ಘಟನೆಗೆ ಸಂಬಂಧಪಟ್ಟಂತೆ ಪರಿಸ್ಥಿತಿಯ ಬಗ್ಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಮೇಲ್ವಿಚಾರಣೆ ನಡೆಸಿ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಆರೋಗ್ಯ ಇಲಾಖೆ ರಾಜ್ಯ ಸಚಿವರಾದ ಅನುಪ್ರಿಯಾ ಪಟೇಲ್, ಆರೋಗ್ಯ ಇಲಾಖೆ ಕಾರ್ಯದರ್ಶಿ ಸಿಕೆ ಮಿಶ್ರ ಅವರಿಗೆ ಗೋರಕ್ ಪುರಕ್ಕೆ ಭೇಟಿ ನೀಡುವಂತೆ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡ ಸೂಚನೆ ನೀಡಿದ್ದು, ವರದಿ ನೀಡುವಂತೆ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com